ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ನಮ್ಮ ಮೆಟ್ರೋ 3ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.
ಈ ಕುರಿತಂತೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದು, ಬಹು ನಿರೀಕ್ಷಿತ ₹15,611 ಕೋಟಿ ವೆಚ್ಚದ ಬೆಂಗಳೂರು ಮೆಟ್ರೋ ರೈಲು ಯೋಜನೆ ಹಂತ-3ರ ಎರಡು ಪಥಗಳ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ ನೀಡಿದ್ದು, ಇದಕ್ಕಾಗಿ ನಾನು ಗೌರವಾನ್ವಿತ ಪ್ರಧಾನಿಗಳಾದ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.
ಕೇಂದ್ರ ಸರಕಾರವು ಬೆಂಗಳೂರು ನಗರದ ಜನತೆಗೆ ನೀಡಿರುವ ವರ ಮಹಾಲಕ್ಷ್ಮೀ ಹಬ್ಬದ ಉಡುಗೊರೆ ಎಂದೇ ನಾನು ಭಾವಿಸಿದ್ದೇನೆ. ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಸಾಕಷ್ಟು ಉತ್ತೇಜನ ನೀಡುತ್ತಿರುವ ಮಾನ್ಯ ಪ್ರಧಾನಿಗಳಿಗೆ ನನ್ನ ಧನ್ಯವಾದಗಳನ್ನು ತಿಳಿಸಿದ್ದಾರೆ.