ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಸರ್ಕಾರ ಈರುಳ್ಳಿಯನ್ನು ಕಡಿಮೆ ದರದಲ್ಲಿ ಮಾರಾಟಕ್ಕೆ ಮುಂದಾಗಿದೆ.
ಗ್ರಾಹಕರ ಮೇಲಿನ ಹೊರೆ ಕಡಿಮೆ ಮಾಡಲು ಈರುಳ್ಳಿಯನ್ನು ವಾಹನಗಳ ಮೂಲಕ ಮಾರಾಟ ಮಾಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್ ಜೋಶಿಹೇಳಿದ್ದಾರೆ.
ದೆಹಲಿಯ ಕೃಷಿ ಭವನದಲ್ಲಿ ಈರುಳ್ಳಿ ಚಿಲ್ಲರೆ ಮಾರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟ (NCCF) ಚಿಲ್ಲರೆ ಅಂಗಡಿಗಳ ಮೂಲಕ ಈರುಳ್ಳಿಯನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಪ್ರತಿ ಕಿಲೋಗ್ರಾಂಗೆ 35 ರೂ. ಸಬ್ಸಿಡಿ ದರದಲ್ಲಿ ಈರುಳ್ಳಿಯನ್ನು ಮಾರಾಟ ಮಾಡಲಾಗುತ್ತದೆ ಎಂದು ತಿಳಿಸಿದರು.
ಈರುಳ್ಳಿ ಖರೀದಿ ಮಾಡಿ ಸಂಗ್ರಹಿಸಿ, ಅದನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತದೆ. ಗ್ರಾಹಕರಿಗೆ ಹೊರ ಕಡಿಮೆ ಮಾಡಲು ಕೆ.ಜಿಗೆ 35 ರೂ.ಯಂತೆ ದರ ಇಳಿಸಲಾಗಿದೆ ಎಂದು ಹೇಳಿದರು.
ಕೃಷಿ ಭವನ, ಎನ್‌ಸಿಯುಐ ಸಂಕೀರ್ಣ, ರಾಜೀವ್ ಚೌಕ್ ಮೆಟ್ರೋ ನಿಲ್ದಾಣ, ಪಟೇಲ್ ಚೌಕ್ ಮೆಟ್ರೋ ನಿಲ್ದಾಣ, ಸಿಜಿಒ ಮತ್ತು ನೋಯ್ಡಾ ಮತ್ತು ಗಾಜಿಯಾಬಾದ್‌ನ ಕೆಲವು ಭಾಗಗಳು ಸೇರಿದಂತೆ 38 ಸ್ಥಳಗಳಲ್ಲಿ ಈರುಳ್ಳಿ ಮಾರಾಟ ವಾಹನಗಳ ಮೂಲಕ ಮಾರಾಟವನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.