ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಆರು ಮಸೂದೆ ಮಂಡಿಸಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಸಂಸತ್ ನಲ್ಲಿ ಮಣಿಪುರದ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಮಂಡಿಸಿದೆ .

ಸದನದಲ್ಲಿ ಸದಸ್ಯರು ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕೂಡಲೇ ಪ್ರತಿಭಟನೆಗಳು ಪ್ರಾರಂಭವಾದವು.

ಪ್ರಶ್ನೋತ್ತರ ವೇಳೆಯಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿಷಯ ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಅವಿಶ್ವಾಸ ಗೊತ್ತುವಳಿ ಮಂಡನೆಯಾದ ನಂತರ ಎರಡನೇ ಬಾರಿ ಕಲಾಪವನ್ನು ಮುಂದೂಡಲಾಯಿತು .

ಬಳಿಕ ಪ್ರತಿಭಟನೆಯ ನಡುವೆ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ಸೇರಿದಂತೆ ಆರು ಮಸೂದೆಗಳನ್ನು ಮಂಡಿಸಲಾಯಿತು. ಸಂಕ್ಷಿಪ್ತ ಚರ್ಚೆಯ ನಂತರ ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು. ಬಳಿಕ ಸಂವಿಧಾನ(ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಜಾತಿಗಳ ಆದೇಶ (ತಿದ್ದುಪಡಿ) ಮಸೂದೆ, 2023 ಮತ್ತು ಸಂವಿಧಾನ (ಜಮ್ಮು ಮತ್ತು ಕಾಶ್ಮೀರ) ಪರಿಶಿಷ್ಟ ಪಂಗಡಗಳ ಆದೇಶ (ತಿದ್ದುಪಡಿ) ಮಸೂದೆ, 2023 ಅನ್ನು ಮಂಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!