ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಮ್ಮ ಬಣದಿಂದ ಅಭ್ಯರ್ಥಿ ನಿಲ್ಲಿಸುವ ನಿರ್ಧಾರದಿಂದ ನಾವು ಹಿಂದೆ ಸರಿದಿಲ್ಲ. ಚುನಾವಣೆ ನಡೆದರೆ ನಾವು ಅಭ್ಯರ್ಥಿ ಘೋಷಿಸುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಆಗೇ ಆಗುತ್ತದೆ ಎಂದು ಕುಮಾರ್ ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ನಮ್ಮ ರಾಜ್ಯದ ವಿದ್ಯಮಾನಗಳ ಬಗ್ಗೆ ನಾವು ಹೈಕಮಾಂಡ್ ಮಾಹಿತಿ ಕೊಟ್ಡಿದ್ದೇವೆ. ನಮ್ಮ ನಿರ್ಧಾರದಿಂದ ನಾವು ಹಿಂದೆ ಸರಿಯಲ್ಲ. ರಾಜ್ಯಾಧ್ಯಕ್ಷರ ಚುನಾವಣೆಗೆ ನಾವು ಸ್ಪರ್ಧೆ ಮಾಡುತ್ತೇವೆ ಎಂದು ಹೇಳಿದ್ದಾರೆ.