ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದಿಂದ ವಿಜಯೇಂದ್ರರನ್ನು ಬದಲಾಯಿಸುವುದು ಯತ್ನಾಳ್ ಅವರ ಹಣೆಯಲ್ಲಿ ಬರೆದಿಲ್ಲ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ದಾರೆ.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಮುಂದುವರೆಯುವುದು ಸೂರ್ಯ ಚಂದ್ರ ಇರುವುಷ್ಟೇ ಸತ್ಯ. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆ ಎದುರಿಸುತ್ತೇವೆ. ತಾಕತ್ತಿದ್ದರೆ ರಾಜ್ಯಾಧ್ಯಕ್ಷ ಬದಲಾವಣೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.