Wednesday, August 17, 2022

Latest Posts

ಕಲಿಯಲು ಇಚ್ಛೆಯಿದ್ದರೂ ಮನೆಯಲ್ಲಿ ಕಾಸಿಲ್ಲ: ಬೀದಿಯಲ್ಲಿ ಸಾಕ್ಸ್​ ಮಾರುತ್ತಿದ್ದ ಬಾಲಕನ್ನು ಕಂಡು ನೆರವಿಗೆ ಧಾವಿಸಿದ ಮುಖ್ಯಮಂತ್ರಿ!

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮನೆಯ ಆರ್ಥಿಕ ಸಮಸ್ಯೆಯಿಂದ ಎರಡನೇ ತರಗತಿಯಲ್ಲಿ ಮದ್ಯಂತರಕ್ಕೆ ಶಾಲೆ ಬಿಟ್ಟಿದ್ದ 10 ವರ್ಷದ ಬಾಲಕನ ನೆರವಿಗೆ ಪಂಜಾಬ್​ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಧಾವಿಸಿದ್ದಾರೆ.
ಲೂದಿಯಾನಾದ ಬಾಲಕ ವಂಶ್​ ಸಿಂಗ್ ಎನ್ನುವ ಬಾಲಕ ಶಾಲೆ ಬಿಟ್ಟು ಟ್ರಾಫಿಕ್ ಸಿಗ್ನಲ್​ಗಳಲ್ಲಿ ಸಾಕ್ಸ್​​ಗಳನ್ನು ಮಾರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದನ್ನು ಗಮನಿಸಿದ್ದ ಸಿಎಂ ಅಮರಿಂದರ್ ಸಿಂಗ್ ಅಧಿಕಾರಿಗಳ ಮೂಲಕ ಬಾಲಕನಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ.
ಕೂಡಲೇ ಬಾಲಕನನ್ನು ಶಾಲೆಗೆ ದಾಖಲಿಸಿ, ಕೊರೋನಾ ಹಿನ್ನೆಲೆ ವಿದ್ಯಾರ್ಥಿಗಳಿಗೆ ಆನ್​ಲೈನ್​ ತರಗತಿಗಳನ್ನು ಕಲಿಯಲು ಮಾಡಿ ಕೊಟ್ಟಿರುವ ಅನುಕೂಲಗಳನ್ನೂ ಈ ವಿದ್ಯಾರ್ಥಿಗೆ ನೀಡಬೇಕು ಎಂದು ಆದೇಶಿಸಿದ್ದಾರೆ. ಅಲ್ಲದೇ ಸಿಎಂ ಅವರು ತಮ್ಮ ವೈಯಕ್ತಿಕವಾಗಿ ಬಾಲಕನ ಕುಟುಂಬಕ್ಕೆ 2 ಲಕ್ಷ ರೂಪಾಯಿ ನೆರವು ನೀಡಿದ್ದಾರೆ.
ಈ ಕುರಿತು ಟ್ವಿಟ್ಟರ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮರಿಂದರ್ ಸಿಂಗ್ ಅವರು, ಆರ್ಥಿಕ ಸಮಸ್ಯೆಯಿಂದ ಶಾಲೆ ಬಿಟ್ಟು ಬೀದಿಯಲ್ಲಿ ಸಾಕ್ಸ್​ ಮಾರುವ ಬಾಲಕನ ವಿಡಿಯೋ ಗಮನಿಸಿದ್ದು, ಇದೊಂದು ಬೇಸರದ ಸಂಗತಿಯಾಗಿದೆ. ಆ ಬಾಲಕನನ್ನು ಶಾಲೆಗೆ ಸೇರಿಸುವಂತೆ ಲೂದಿಯಾನಾ ಜಿಲ್ಲಾಧಿಕಾರಿಗೆ ಮಾತನಾಡಿದ್ದೇನೆ. ಆತನ ಕುಟುಂಬಕ್ಕೆ 2 ಲಕ್ಷ ರೂ ನೆರವು ನೀಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!