Thursday, June 30, 2022

Latest Posts

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಬಿ.ಎ.ಬಸವರಾಜ ಭೈರತಿ

ಹೊಸ ದಿಗಂತ ವರದಿ, ದಾವಣಗೆರೆ:

ಸಧ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಭೈರತಿ
ಹೇಳಿದರು.
ತಾಲೂಕಿನ ಬಾಡ ಗ್ರಾಮದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುರುಗೇಶ ನಿರಾಣಿ ಮುಖ್ಯಮಂತ್ರಿಯಾಗುತ್ತಾರೆಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿರುವುದು    ಸರಿಯಲ್ಲ. ಯಾರೇ ಆದರೂ ಸಿಎಂ ಬದಲಾವಣೆ ಹೇಳಿಕೆ ಕೊಡುವುದು ಒಳ್ಳೆಯ ಬೆಳವಣಿಗೆ ಅಲ್ಲ. ಪಕ್ಷದಲ್ಲಿ ಗೊಂದಲ ಸೃಷ್ಟಿಸುವಂತೆ ಯಾರೂ ನಡೆದುಕೊಳ್ಳಬಾರದು. 2023ರ ಚುನಾವಣೆ ನಂತರ ಹೈಕಮಾಂಡ್ ಸೂಚಿಸುವವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದರು.
ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ರ ಹತ್ಯೆಗೆ ಸುಪಾರಿ ಪ್ರಕರಣ ಅತ್ಯಂತ ಖಂಡನೀಯವಾಗಿದ್ದು, ಇಂತಹ ಹೇಯ ಕೃತ್ಯಗಳು ಸಮಾಜಕ್ಕೆ ಒಳಿತಲ್ಲ. ಒಬ್ಬ ವ್ಯಕ್ತಿಯನ್ನು ಹತ್ಯೆ ಮಾಡಲು ಸಂಚು ರೂಪಿಸುವ, ಸುಪಾರಿ ಕೊಡುವಂತಹ ಘಟನೆಗಳು ಸಮಾಜದಲ್ಲಿ ನಡೆಯಬಾರದು. ಇಂತಹ ಕೃತ್ಯಕ್ಕೆ ಯಾರೇ ಮುಂದಾದರೂ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಪ್ರಕರಣದ
ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ. ಯಾರೇ ತಪ್ಪು ಮಾಡಿದ್ದರೂ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಇಂತಹ ಕೃತ್ಯಕ್ಕೆ ಪ್ರೇರಣೆ ನೀಡಿದವರು ಯಾರೇ ಆಗಿದ್ದರೂ ಕಠಿಣ ಕ್ರಮಕ್ಕೆ ಸಿಎಂ, ಗೃಹ ಸಚಿವರಿಗೆ ನಾನೂ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಬೆಳಗಾವಿ ಕ್ಷೇತ್ರದಲ್ಲಿ ಲಖನ್ ಜಾರಕಿಹೊಳಿ ಸ್ಪರ್ಧೆಯಿಂದ ಬಿಜೆಪಿಗೆ ಹಿನ್ನಡೆಯಾಗುವುದಿಲ್ಲ. ಅಲ್ಲಿ ನಮ್ಮದೇ ಪಕ್ಷದ ಶಾಸಕರಿದ್ದು, ಪ್ರeವಂತ ಮತದಾರರಿದ್ದಾರೆ. ಲಖನ್ ಸ್ಪರ್ಧೆಯಿಂದ ಪಕ್ಷಕ್ಕೆ ಯಾವುದೇ ಹಾನಿಯೂ ಆಗುವುದಿಲ್ಲ. ನಮಗೆ ಮೊದಲ ಪ್ರಾಶಸ್ತ್ಯದ ಮತ ದೊರಕಿಸಿಕೊಡಲು ಶ್ರಮಿಸುವುದಾಗಿ ಶಾಸಕ, ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಎರಡನೇ ಪ್ರಾಶಸ್ತ್ಯದ ಮತವನ್ನು ಏನು ಮಾಡುತ್ತಾರೋ ಗೊತ್ತಿಲ್ಲ. ಬೆಳಗಾವಿ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಯೆ ಗೆಲ್ಲುವ ವಿಶ್ವಾಸವಿದೆ
ಎಂದು ಅವರು ಹೇಳಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಬಗ್ಗೆ ನಾನು ಹೆಚ್ಚು ಮಾತನಾಡಲ್ಲ. ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರುತ್ತಾರೋ, ಇಲ್ಲವೋ ಎಂಬುದನ್ನು ಕಾದು ನೋಡೋಣ. ಮೊದಲು ಕಾಂಗ್ರೆಸ್ಸಿನಲ್ಲಿದ್ದ ಎ.ಮಂಜು ಬಳಿಕ ಬಿಜೆಪಿಗೆ ಬಂದರು. ಆಕಸ್ಮಾತ್ ಎ.ಮಂಜು ಪಕ್ಷ
ಬಿಟ್ಟರೆ ನಮ್ಮ ಪಕ್ಷದಲ್ಲೇ ಬೇಕಾದಷ್ಟು ಮಂದಿ ಇದ್ದಾರೆ. ಅಧಿಕಾರಕ್ಕಾಗಿ ಮಂಜು ಪಕ್ಷ ಬದಲಾವಣೆ ಮಾಡಿದ್ದಾರೆ. ಅಧಿಕಾರಕ್ಕೋಸ್ಕರ ಪಕ್ಷ ಬಿಟ್ಟು ಹೋಗುವುದು ಉತ್ತಮ ಬೆಳವಣಿಗೆಯೂ ಅಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss