ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುತ್ತೆ ಧೈರ್ಯವಿದ್ದರೆ ನಿಲ್ಲಿಸಿ: ಮಮತಾ ಬ್ಯಾನರ್ಜಿ ಗೆ ಬಿಜೆಪಿ ಸವಾಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಗೆ ಬರಲಿದೆ.ಇದನ್ನು ತಡೆಯುವ ಧೈರ್ಯವಿದೆಯಾ ಎಂದು ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೆ ಸವಾಲು ಎಸೆದಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ಠಾಕೂರ್‌ನಗರದಲ್ಲಿ ನಡೆದ ಸಭೆಯೊಂದರಲ್ಲಿ ಮಾತನಾಡಿದ ಅವರು, ಒಬ್ಬ ಎಲ್ಲಾ ಕಾನೂನು ದಾಖಲೆಗಳೊಂದಿಗೆ ವಿಶ್ವಾಸಾರ್ಹ ನಿವಾಸಿಯಾಗಿದ್ದರೆ, ಯಾರು ಕೂಡ ಪೌರತ್ವವನ್ನು ಕಸಿದುಕೊಳ್ಳಲಾಗುವುದಿಲ್ಲ. ಸಿಎಎ ಬಗ್ಗೆ ನಾವು ಹಲವಾರು ಬಾರಿ ಚರ್ಚಿಸಿದ್ದೇವೆ. ಇದು ರಾಜ್ಯದಲ್ಲಿ ಜಾರಿಯಾಗಲಿದೆ. ನಿಮಗೆ ಧೈರ್ಯವಿದ್ದರೆ, ಅದನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ ಎಂದು ಸವಾಲೊಡ್ಡಿದ್ದಾರೆ.

ಅಫ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್ ಸಮುದಾಯಗಳಿಗೆ ಸೇರಿದ ವಲಸಿಗರಿಗೆ ಪೌರತ್ವವನ್ನು ನೀಡಲು ಸಿಎಎ ಅನುಕೂಲ ಮಾಡಿಕೊಡುತ್ತದೆ. ಆದರೆ ಇದಕ್ಕೆ ತಕ್ಕದಾದ ನಿಯಮಗಳನ್ನು ಇನ್ನೂ ರೂಪಿಸದ ಕಾರಣ, ಇದುವರೆಗೆ ಯಾರಿಗೂ ಅದರ ಅಡಿಯಲ್ಲಿ ಪೌರತ್ವ ನೀಡಲು ಸಾಧ್ಯವಾಗಲಿಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!