ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದು, ಎಫ್ ಐಆರ್ ದಾಖಲಿಸುವಂತೆ ಜನಪ್ರತಿನಿಧಿ ನ್ಯಾಯಾಲಯ ಸೂಚಿಸಿದೆ. ಇಂದು ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.
ಎಫ್‌ಐಆರ್ ದಾಖಲಾದರೆ ಸಿದ್ದರಾಮಯ್ಯ ಎ1 ಮತ್ತು ಅವರ ಪತ್ನಿ ಪಾರ್ವತಿ ಎ2 ಆರೋಪಿಯಾಗಲಿದ್ದಾರೆ. ಈ ಬಗ್ಗೆ ಸ್ನೇಹಮಯಿ ಕೃಷ್ಣ ಅವರು ಈಗಾಗಲೇ ದೂರು ನೀಡಿದ್ದಾರೆ.
ಸ್ನೇಹಮಯಿ ಕೃಷ್ಣ ದೂರಿನ ಮೇರೆಗೆ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಹೋದರ ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾರಿದ ದೇವರಾಜು ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆಸಲಾಗಿದೆ.