Friday, January 9, 2026

ʼಸಿಎಂ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದೆ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಮೇಲೆ ದೌರ್ಜನ್ಯ ಪ್ರಕರಣವನ್ನು ವಿಪಕ್ಷ ನಾಯಕ ಅಶೋಕ್ ಖಂಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿಯ ಮಹಿಳಾ ಕಾರ್ಯಕರ್ತೆಯೊಬ್ಬರನ್ನು ವಿವಸ್ತ್ರಗೊಳಿಸಿ ಥಳಿಸಿರುವ ಅಮಾನುಷ ಘಟನೆ ನಡೆದಿದ್ದು, ಈ ಲಜ್ಜೆಗೆಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಎಗ್ಗಿಲ್ಲದೆ ನಡೆಯುತ್ತಿರುವ ದ್ವೇಷ ರಾಜಕಾರಣಕ್ಕೆ ಮತ್ತೊಂದು ಉದಾಹರಣೆಯಾಗಿದೆ. 

ಕಾಂಗ್ರೆಸ್ ಸರ್ಕಾರದಲ್ಲಿ ದಿನ ಬೆಳಗಾದರೆ ವಿಪಕ್ಷ ಶಾಸಕರ ಮೇಲೆ ಕೊಲೆ ಯತ್ನ, ವಿಪಕ್ಷ ಕಾರ್ಯಕರ್ತರ ಮೇಲೆ ಹಲ್ಲೆ, ದೌರ್ಜನ್ಯ ಇವೆಲ್ಲವೂ ಸರ್ವೇ ಸಾಮಾನ್ಯವಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

error: Content is protected !!