ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಬದಲಾವಣೆ ಕುರಿತ ಚರ್ಚೆ ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಡಿಸಿಎಂ ಡಿ.ಕೆ. ಶಿವಕುಮಾರ್ ಈ ವಿಷಯವನ್ನು ಮುಚ್ಚಿಹಾಕಲು ಯತ್ನಿಸಿದರು.
ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತಿನಿ ಎಂಬ ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಡೆ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿಸಿಎಂ ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ನೇರವಾಗಿ ಹೇಳಿದ್ದಾರೆ.
ದೇಶಪಾಂಡೆ ಹಿರಿಯ ನಾಯಕ ಹಾಗೂ ಅನುಭವಿ ರಾಜಕಾರಣಿ. ಸಿಎಂ ಆಗುವ ಆಸೆಯಲ್ಲಿ ತಪ್ಪೇನಿಲ್ಲ. ಅವರು ಏನು ನಿರೀಕ್ಷಿಸುತ್ತಾರೆಂದು ನನಗೆ ತಿಳಿದಿಲ್ಲ. ಆಸೆ ಇದ್ದರೂ ಅದನ್ನು ಮಾಧ್ಯಮದ ಮುಂದೆ ಹೇಳಿಕೆ ನೀಡುವುದಲ್ಲ. ಪಕ್ಷದ ಹೈಕಮಾಂಡ್ ಅವರಿಗೆ ಸೂಕ್ತ ಗೌರವ ನೀಡಲಿದೆ. ಆದರೆ, ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ ಎಂದರು.