ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸಿದ್ಧಾಂತವನ್ನು ಒಪ್ಪುವ ಯಾರೇ ಬಂದರೂ ಸ್ವಾಗತಿಸುತ್ತೇನೆ ಎಂದು ಹೇಳಿಕೆ ನೀಡಿರುವ ಸಿದ್ದರಾಮಯ್ಯ, ಸಿಪಿ ಯೋಗೇಶ್ವರ್ ಪಕ್ಷಕ್ಕೆ ಬರುವ ಮುನ್ಸೂಚನೆ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ಡಿಕೆ ಸುರೇಶ್ ಹೆಸರು ಕೂಡ ಇದೆ. ನಮ್ಮ ಪಕ್ಷದ ನಾಯಕರು ಅಲ್ಲಿದ್ದು, ಸೂಕ್ತ ಅಭ್ಯರ್ಥಿಯನ್ನು ನಿರ್ಧರಿಸಲಿದ್ದಾರೆ. ಉತ್ತಮ ಅಭ್ಯರ್ಥಿಗಳಿರಬೇಕು ಎಂದು ಸೂಚಿಸಿದ್ದೇನೆ ಎಂದರು.
ಸಂಡೂರಿನಿಂದ ತುಕಾರಾಮ್ ಪತ್ನಿಗೆ ಟಿಕೆಟ್ ನೀಡುತ್ತೇನೆ. ಚನ್ನಪಟ್ಟಣ ಮತ್ತು ಶಿಗ್ಗಾಂವಿಯ ಟಿಕೆಟ್ ಇಂದು ನಿರ್ಧಾರವಾಗಲಿದೆ. ಸಂಜೆ ವೇಳೆಗೆ ಮೂರು ಕ್ಷೇತ್ರಗಳ ಟಿಕೆಟ್ ಘೋಷಣೆ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.