ನಾಳೆ ಕಾಂಗ್ರೆಸ್‌ ಸರ್ಕಾರದ ಯುವನಿಧಿ ಯೋಜನೆಗೆ ಚಾಲನೆ ನೀಡಲಿರುವ ಸಿಎಂ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಜ. ೧೨ ಶುಕ್ರವಾರ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್‌ ಸರ್ಕಾರದ ಕೊನೆಯ ಯೋಜನೆಯಾದ ಯುವನಿಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಅರು ಚಾಲನೆ ನೀಡಲಿದ್ದಾರೆ. ಆ ಮೂಲಕ ಚುನಾವಣೆ ಸಂದರ್ಭ ಘೋಷಿಸಿದ 5ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಗರದ ಫ್ರೀಡಂಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸುಮಾರು ಒಂದೂವರೆ ಲಕ್ಷ ಜನರು ಭಾಗವಹಿಸಲಿದ್ದಾರೆ. ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳಿಂದ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಬಿಜೆಪಿಯವರ ಟೀಕೆ, ಟಿಪ್ಪಣಿಗೆ ಕಾರ್ಯಕ್ರಮದ ಮೂಲಕವೇ ಉತ್ತರ ಕೊಡುತ್ತೇವೆ ಎಂದರು. ಬಿಜೆಪಿಯವರು ತಾವು ನೀಡಿದ್ದ ಭರವಸೆಗಳ ಪೈಕಿ ಯಾವೆಲ್ಲ ಕಾರ್ಯಕ್ರಮ ಅನುಷ್ಠಾನ ಮಾಡಿದ್ದಾರೆ ತೋರಿಸಲಿ ಎಂದು ಈ ಮೂಲಕ ಸವಾಲು ಹಾಕಿದರು.

ಕಾಂಗ್ರೆಸ್‌ನ ಐದನೇ ಗ್ಯಾರಂಟಿ, ಯುವನಿಧಿಗೆ ಈ ವರ್ಷ ನೋಂದಣಿಗೆ 5.29 ಲಕ್ಷ ಟಾರ್ಗೆಟ್ ಇದ್ದು, ಈವರೆಗೆ 61 ಸಾವಿರ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ ಎಂದು ಸಚಿವ ಶರಣ ಪ್ರಕಾಶ್‌ ಪಾಟೀಲ್ ತಿಳಿಸಿದ್ದಾರೆ.

ಯುವನಿಧಿ ಯೋಜನೆಗೆ ಆನ್‌ಲೈನ್ ಮೂಲಕ ವಿದ್ಯಾರ್ಥಿಗಳು ನೋಂದಣಿ ಮಾಡುತ್ತಿದ್ದಾರೆ. ವಿವೇಕಾನಂದ ಜಯಂತಿ ದಿನ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತಿದೆ. ಯುವ ನಿಧಿಗೆ ನೋಂದಣಿ ಮಾಡಿದವರಿಗೆ ಹೆಚ್ಚುವರಿ ಕೌಶಲ್ಯಾಭಿವೃದ್ಧಿ ತರಬೇತಿ ಕೊಡಿಸಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!