ರಾಜ್ಯದ ಯುವ ಜನತೆಗೆ ‘ರಾಷ್ಟ್ರೀಯ ಯುವ ದಿನ’ದ ಶುಭಾಶಯ ತಿಳಿಸಿದ ಸಿಎಂ

ಹೊಸದಿಂಗತ ಡಿಜಿಟಲ್ ಡೆಸ್ಕ್:

ನಾಡಿನ ಸಮಸ್ತ ಯುವ ಜನತೆಗೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿದ ಸಿಎಂ ಸಿದ್ದರಾಮಯ್ಯ ‘ಅಸ್ಪೃಶ್ಯತೆ, ಅಂಧ ಶ್ರದ್ದೆ ಮತ್ತು ಪುರೋಹಿತಶಾಹಿ ಡಾಂಭಿಕತನವನ್ನು ತೊಲಗಿಸಿ ಹಿಂದೂ ಧರ್ಮದ ಸುಧಾರಣೆಗೆ ನಿರಂತರ ಪ್ರಯತ್ನ ಸ್ವಾಮಿ ವಿವೇಕಾನಂದರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ ಎಂದರು.

ಬಡತನ ಮತ್ತು ಅನಾರೋಗ್ಯದಿಂದ ಕುಂದದೆ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ಕಿರಿ ವಯಸ್ಸಿನಲ್ಲಿಯೇ ವಿಶ್ವವೇ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದು ನಿಂತ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಫೂರ್ತಿ.

ನಾಡಿನ ಸಮಸ್ತ ಯುವಕ-ಯುವತಿಯರಿಗೆ ರಾಷ್ಟ್ರೀಯ ಯುವದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!