ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅವರ ಪ್ರವಾಸ ರದ್ದಾದ ಹಿನ್ನೆಲೆ ರಾಯಚೂರಿನ ಲಿಂಗಸುಗೂರಿನ ಹಟ್ಟಿ ಪಟ್ಟಣದಲ್ಲಿ ಆಯೋಜಿಸಿದ್ದ ʻಹಟ್ಟಿ ಚಿನ್ನದಗಣಿ ಕಂಪನಿ ಸಿಬ್ಬಂದಿ ಹಾಗೂ ಕಾರ್ಮಿಕರ ವಸತಿ ಸಮುಚ್ಚಯ ನಿರ್ಮಾಣʼದ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಇಂದು (ಆಗಸ್ಟ್ 6) ಮಧ್ಯಾಹ್ನ 12ಕ್ಕೆ ನಡೆಯಬೇಕಿದ್ದ 998 ಕೋಟಿ ರೂಪಾಯಿ ವೆಚ್ಚದ ಕಾಮಗಾರಿ ಅಡಿಗಲ್ಲು ಸಮಾರಂಭಕ್ಕೆ ಸಿಎಂ ಗೈರು ಹಿನ್ನೆಲೆ ಕಾರ್ಯಕ್ರಮವನ್ನ ಮುಂದೂಡಲಾಗಿದೆ. ಹವಾಮಾನ ವೈಪರೀತ್ಯ ಹಿನ್ನೆಲೆ ಸಿಎಂ ರಾಯಚೂರು ಪ್ರವಾಸ ರದ್ದಾಗಿದೆ. ಹಟ್ಟಿ ಪಟ್ಟಣದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕಾಗಿ ಜಿಲ್ಲಾಡಳಿತ ಸುಮಾರು 10ಕ್ಕೂ ಅಧಿಕ ಪೂರ್ವಸಿದ್ಧತೆ ಸಭೆ ಮಾಡಿತ್ತು. ವೇದಿಕೆ ಸಿದ್ಧತೆ ಜೊತೆಗೆ ಸುಮಾರು 5 ಸಾವಿರಕ್ಕೂ ಅಧಿಕ ಜನರಿಗಾಗಿ ಆಸನಗಳ ವ್ಯವಸ್ಥೆ ಮಾಡಿಕೊಂಡಿದ್ದರು.