ಶೀಘ್ರದಲ್ಲೇ ಜಿಲ್ಲಾಧಿಕಾರಿಗಳು ನೀಡಲಿದ್ದಾರೆ ದಸರಾದ ಖರ್ಚು, ವೆಚ್ಚಗಳ ಮಾಹಿತಿ: ಸಚಿವ ಮಹದೇವಪ್ಪ

ಹೊಸದಿಗಂತ ವರದಿ,ಮೈಸೂರು:

ಈ ಬಾರಿ ನಡೆದ ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಖರ್ಚು, ವೆಚ್ಚಗಳನ್ನು ಜಿಲ್ಲಾಧಿಕಾರಿಗಳು ಶೀಘ್ರದಲ್ಲೇ ನೀಡಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ಭಾನುವಾರ ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಂಭದಲ್ಲಿ ವೈಭವದ ದಸರಾ ಆಚರಿಸುತ್ತೇವೆಂದು ಹೇಳಿದ್ದೆವಾದರೂ ಮುಂದಿನ ದಿನಗಳಲ್ಲಿ ಮಳೆ ಭಾರಿ ಪ್ರಮಾಣದಲ್ಲಿ ಕೊರತೆಯಾದುದರಿಂದ ಅದ್ದೂರಿಯೂ ಅಲ್ಲದ ಸರಳವೂ ಅಲ್ಲದ ಸಾಂಪ್ರದಾಯಕ ದಸರಾ ಆಯೋಜಿಸಲು ತೀರ್ಮಾನಿಸಲಾಯಿತು ಎಂದರು.

ಈ ಬಾರಿಯ ದಸರಾದಲ್ಲಿ ಕಾರ್ಯನಿರ್ವಹಿಸಿದ ಬಹುತೇಕ ಅಧಿಕಾರಿಗಳು ಹೊಸಬರಾದರು ತಮ್ಮ ಜವಾಬ್ದಾರಿಗಳನ್ನ ಸಮರ್ಪಕವಾಗಿ ಹಾಗೂ ಪ್ರಾಮಾಣಿಕವಾಗಿ ನಿರ್ವಹಿಸಿ 10 ಲಕ್ಷಕ್ಕೂ ಹೆಚ್ಚು ಜನ ಸೇರಿದರೂ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದವಾಗದಂತೆ ಕಾರ್ಯ ನಿರ್ವಹಿಸಿದ್ದಾರೆಂದರು.

ದಸರಾ ದೀಪಾಲಂಕಾರ ನ.5 ರ ವರಗೆ ಇರಲಿದ್ದು, ಈ ಬಾರಿಯ ದೀಪಾಲಂಕಾರದಲ್ಲಿ ಸಾಮಾಜಿಕ ಸಂದೇಶಗಳು,ಪ್ರಜಾಪ್ರಭುತ್ವ ,ಸಂವಿಧಾನ,ನಾಲ್ವಡಿಯವರ ಕೊಡುಗೆಗಳು ರಾರಾಜಿಸಿವೆ ಹಾಗೂ ಸಂಬoಧಿಸಿದ ದಸರಾ ಖರ್ಚು ವೆಚ್ಚಗಳನ್ನು ಜಿಲ್ಲಾಧಿಕಾರಿಗಳು ಶೀಘ್ರವೇ ನೀಡಲಿದ್ದಾರೆ ಎಂದರು.

ಒಟ್ಟಾರೆಯಾಗಿ ದಸರಾ ಯಶಸ್ಸಿಗೆ ಸಹಕಾರ ನೀಡಿದ ರಾಜ್ಯ ಸರ್ಕಾರ,ಮುಖ್ಯಮಂತ್ರಿಗಳು,ಸಚಿವರುಗಳು, ಜನಪ್ರತಿನಿಧಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಅಭಿನಂದನೆಗಳು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!