ಹೊಸದಿಗಂತ ಡಿಜಿಟಲ್ ಡೆಸ್ಕ್
ಬಿಜೆಪಿ ದಕ್ಷಿಣ ಕನ್ನಡ ಯುವಮೋರ್ಚಾದ ವತಿಯಿಂದ ಬಂಟ್ವಾಳದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಕಾಸ್ ತೀರ್ಥ ರ‍್ಯಾಲಿಯ ಸಮಾರೋಪವನ್ನು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಜಿಲ್ಲಾಧ್ಯಕ್ಷ ಸುದರ್ಶನ ಎಂ. ದೀಪ ಬೆಳಗಿಸಿ ಉದ್ಘಾಟಿಸಿದರು.
ಶಾಸಕರಾದ ರಾಜೇಶ್ ನಾಯ್ಕ್, ಯುವಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪ್, ಯುವಮೋರ್ಚಾ ಜಿಲ್ಲಾಧ್ಯಕ್ಷ ಗುರುದತ್ತ್ ನಾಯಕ್, ಪ್ರಮುಖರಾದ ಸುಧೀರ್ ಶೆಟ್ಟಿ, ಕಸ್ತೂರಿ ಪಂಜ, ರಾಮದಾಸ್ ಬಂಟ್ವಾಳ, ಸತೀಶ್ ಕುಂಪಲ, ಶ್ವೇತ ಪೂಜಾರಿ, ಸೂರಜ್ ಜೈನ್, ಸುದರ್ಶನ್ ಬಜ ಮತ್ತು ಮಂಡಲಗಳ ಯುವಮೋರ್ಚಾ ಅಧ್ಯಕ್ಷರುಗಳು ಉಪಸ್ಥಿತರಿದ್ದರು.