ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂದಿನ ದಿನಗಳಲ್ಲಿ ಭೂಮಿಯ ಧಗೆ ಹೆಚ್ಚಾಗಲಿದೆ. ಯುಗಾದಿಗೆ ಎಲ್ಲವನ್ನೂ ಹೇಳುತ್ತೇನೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಸೋಮವಾರ ಹಳೇ ಹುಬ್ಬಳ್ಳಿಯಲ್ಲಿನ ಶ್ರೀ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು , ಈಗ ಏನು ಬಹಳ ಹೇಳಲ್ಲ. ಯುಗಾದಿಗೆ ಎಲ್ಲವನ್ನೂ ಹೇಳ್ತೇನೆ. ಮಧ್ಯದಲ್ಲಿಯೇ ಹೇಳೋಕೆ ಬರಲ್ಲ ಎಂದು ಹೇಳಿದ್ದಾರೆ.
ಈ ವೇಳೆ ಸರ್ಕಾರ ಪತವಾಗುತ್ತದಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯಕ್ಕೇನು ತೊಂದರೆಯಿಲ್ಲ. ಬರುವ ದಿನಗಳು ಶುಭ ಮತ್ತು ಅಶುಭ ಗಳಿಂದ ಕೂಡಿದ್ದು, ಮುಂದಿನ ದಿನಗಳಲ್ಲಿ ಭೂಮಿಯ ಧಗೆ ಹೆಚ್ಚಾಗಲಿದೆ. ಯುಗಾದಿಗೆ ಎಲ್ಲವನ್ನೂ ಹೇಳ್ತೇನೆ. ಮೈಲಾರ ಕಾರ್ಣಿಕಕ್ಕೂ ಇದಕ್ಕೂ ಏನು ಸಂಬಂಧವಿಲ್ಲ ಎಂದು ಹೇಳಿದರು.