September 30, 2026
Wednesday, September 30, 2026
spot_img

ಏಕಾಂಗಿ ಸಮರಕ್ಕೆ ದಳಪತಿ ಸಜ್ಜು: ಮೈತ್ರಿ ಇಲ್ಲ, ಹೊಂದಾಣಿಕೆಯೂ ಇಲ್ಲ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ರಾಜಕೀಯ ಚಿತ್ರಣ ಬದಲಿಸಲು ಹೊರಟಿರುವ ನಟ, ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಸೇಲಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ನಾವು ಏಕಾಂಗಿಯಾಗಿ ಸ್ಪರ್ಧಿಸಲಿದ್ದೇವೆ” ಎಂದು ಘೋಷಿಸಿದ್ದಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಥವಾ ವಿರೋಧ ಪಕ್ಷಗಳ I.N.D.I.A ಮೈತ್ರಿಕೂಟದೊಂದಿಗೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ ವಿಜಯ್, ಸ್ವಂತ ಬಲದ ಮೇಲೆ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವ ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Must Read