ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಇಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದೆ.
ಈ ಪರಿಕಲ್ಪನೆಯು ದೇಶಾದ್ಯಂತ ಏಕಕಾಲದಲ್ಲಿ ಮತದಾನ ಎಂಬುದನ್ನ ಸೂಚಿಸುತ್ತದೆ. ರಾಷ್ಟ್ರೀಯ ಅಸೆಂಬ್ಲಿ ಮತ್ತು ಎಲ್ಲಾ ರಾಜ್ಯಗಳ ಅಸೆಂಬ್ಲಿಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾಪವಿದೆ.
ಭಾರತದಲ್ಲಿ, ಪ್ರಸ್ತುತ ಸರ್ಕಾರದ ಅವಧಿಯು ಅಂತ್ಯಗೊಂಡಾಗ ಅಥವಾ ಯಾವುದೇ ಕಾರಣಕ್ಕಾಗಿ ವಿಸರ್ಜಿಸಲ್ಪಟ್ಟಾಗ, ಸಂಸತ್ತಿನ ಸದಸ್ಯರನ್ನು ಆಯ್ಕೆ ಮಾಡಲು ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ಚುನಾವಣೆಗಳು ಪ್ರತ್ಯೇಕವಾಗಿ ನಡೆಯುತ್ತವೆ.
ಪ್ರಧಾನಿ ನರೇಂದ್ರ ಮೋದಿ ಅವರು “ಒಂದು ರಾಷ್ಟ್ರ, ಒಂದು ಚುನಾವಣೆ” ಕಲ್ಪನೆಯನ್ನು ಹಿಂದಿನಿಂದಲ್ಲೂ ಪ್ರತಿಪಾದಿಸುತ್ತಿದ್ದಾರೆ.