ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾವೇರಿ ನಿಯಂತ್ರಣಾ ಸಮಿತಿ ನೀರು ಬಿಡಲು ಹೇಳಿದ್ದು, ಆದ್ರೆ ನಮ್ಮ ಹತ್ತಿರ ನೀರಿಲ್ಲ ಎಂದು ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
ಕೆ ಕೆ ಅತಿಥಿ ಗೃಹದಲ್ಲಿ ಮಾತನಾಡಿದ ಅವರು, ನಮಗೆ ನೀರು ಬಿಡಲು ಸಾಧ್ಯವಿಲ್ಲ ಎಂಬುದನ್ನು ಸಿಎಂ ಹಾಗೂ ನಾನು ನಮ್ಮ ಅಧಿಕಾರಿಗಳಿಗೆ ತಿಳಿಸಿದ್ದೇವೆ. ಆದರೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚಿಸಿದೆ. ಸದ್ಯಕ್ಕೆ ನಮ್ಮ ಬಳಿ ನೀರಿಲ್ಲ. ಈ ಬಗ್ಗೆ ಸಿಎಂ ಬಳಿಯೂ ಚರ್ಚೆ ನಡೆಸಿದ್ದೇನೆ ಎಂದು ಸ್ಪಷ್ಟಪಡಿಸಿದರು.
ಇನ್ನು ನಾಳೆ ನಡೆಯುವ ಮೇಲ್ಮಟ್ಟದ ಸಮಿತಿ ಸಭೆಯಲ್ಲಿ ಏನು ಪ್ರಸ್ತಾಪ ಮಾಡಬೇಕು ಎಂಬುದರ ಬಗ್ಗೆ ದೆಹಲಿಯಲ್ಲಿನ ನಮ್ಮ ಕಾನೂನು ತಜ್ಞರ ಜೊತೆ ಚರ್ಚೆ ನಡೆಸುತ್ತೇನೆ. ವಾಸ್ತವಾಂಶವನ್ನು ಅವರಿಗೆ ತಿಳಿಸುತ್ತೇನೆ. ಕುಡಿಯುವ ನೀರನ್ನು ನಾವು ಉಳಿಸಲೇಬೇಕಾಗಿದೆ ಎಂದರು.
ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿಯು ರಾಜ್ಯಕ್ಕೆ ಶಿಫಾರಸು ಮಾಡಿದೆ. ಕರ್ನಾಟಕ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ