ಬೆಂಗಳೂರು ಖಾಲಿಯಾಗುತ್ತೆ ಎಂದ ಉತ್ತರ ಭಾರತದ ಯುವತಿಗೆ ಶಾಕ್ ಕೊಟ್ಟ ಕಂಪೆನಿ: ಕೆಲಸದಿಂದ ಹೇಳಿದ್ರು ಗೇಟ್ ಪಾಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಉತ್ತರ ಭಾರತೀಯರು ಬೆಂಗಳೂರು ತೊರೆದರೆ ಬೆಂಗಳೂರು ಖಾಲಿಯಾಗುತ್ತದೆ ಎಂದು ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್‌ ಮೂಲಕ ದುರಹಂಕಾರ ಪ್ರದರ್ಶಿಸಿದ ಉತ್ತರ ಭಾರತ ಮೂಲದ ರೀಲ್ಸ್ ರಾಣಿ ಸುಗಂಧಾ ಶರ್ಮಾ ರನ್ನು ಕಂಪನಿಯೇ ಕೆಲಸದಿಂದ ಕಿತ್ತು ಹಾಕಿದೆ.

ರೀಲ್ಸ್ ಮಾಡಿದ್ದ ಸುಗಂಧ ಶರ್ಮಾ ಉತ್ತರ ಭಾರತೀಯರು ಬೆಂಗಳೂರನ್ನು ಬಿಟ್ಟು ಹೊರಟರೆ ಬೆಂಗಳೂರು ಖಾಲಿಖಾಲಿಯಾಗುತ್ತೆ ಎಂದು ಕನ್ನಡಿಗರನ್ನು ಕೆಣಕಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಕನ್ನಡಿಗರು ಸುಗಂಧಾ ಶರ್ಮಾಗೆ ಬೆಂಗಳೂರನ್ನು ತೊರೆಯುವಂತೆ ಓಪನ್ ಆಗಿಯೇ ಚಾಲೆಂಜ್ ಹಾಕಿದ್ದರು. ಆದರೆ ಅವರ ಚಾಲೆಂಜ್ ಪರಿಣಾಮದಿಂದ ಸ್ವತಃ ಅವರೇ ಕೆಲಸ ಕಳೆದುಕೊಳ್ಳುವಂತಾಗಿದೆ.

ಸುಗಂಧಾ ಶರ್ಮಾ ರೀಲ್ಸ್ ನಲ್ಲಿ, ನೀವು ಹೊರಟು ಹೋಗಿ ಎನ್ನುತ್ತಿದ್ದೀರಾ. ನಿಜವಾಗಿಯು ನಾವೆಲ್ಲರೂ ಬೆಂಗಳೂರು ತೊರೆದರೆ ನಿಮ್ಮ ನಗರ ಖಾಲಿಯಾಗುತ್ತದೆ. ನಿಮ್ಮ ಪಿ.ಜಿ.ಗಳು ಖಾಲಿ ಆಗುತ್ತವೆ. ನಿಮಗೆ ಹಣ ಸಂಪಾದನೆಯಾಗುವುದಿಲ್ಲ. ಕೋರಮಂಗಲದ ಎಲ್ಲ ಕ್ಲಬ್‌ಗಳು ಖಾಲಿಯಾಗುತ್ತವೆ. ಪಂಜಾಬಿ ಸಂಗೀತಕ್ಕೆ ಕುಣಿಯುವ ಚೆಂದದ ಹುಡುಗಿಯರು ಕಾಣಿಸುವುದಿಲ್ಲ. ಯೋಚಿಸಿ ಮಾತನಾಡಿ. ಉತ್ತರ ಭಾರತೀಯರು ತೊರೆಯಬೇಕು ಎನ್ನುವ ನಿಮ್ಮ ಆಸೆ ನಿಜವಾದರೆ ಬೆಂಗಳೂರಿನ ಕಳೆಯೇ ಹೋಗಿಬಿಡುತ್ತದೆ’ ಎಂದು ಸುಗಂಧಾ ಶರ್ಮಾ ರೀಲ್ಸ್‌ನಲ್ಲಿ ಹೇಳಿದ್ದರು.

ಕೆಲವೇ ಗಂಟೆಗಳಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಸುಗಂಧಾ ವಿರುದ್ಧ ಸೆಲೆಬ್ರಿಟಿಗಳು ಸೇರಿದಂತೆ ಅನೇಕರು ಕಿಡಿ ಕಾರಿದ್ದಾರೆ.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!