ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಮೃತಪಟ್ಟಿದ್ದಾರೆ.
ಇವರು ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ದೂರುದಾರೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು. ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.