ಹೊಸದಿಗಂತ ಡಿಜಿಟಲ್ ಡೆಸ್ಕ್ :
ಮೊಟ್ಟೆ (Egg) ತಿನ್ನುವ ವಿಚಾರಕ್ಕೆ ನಡೆದ ಘರ್ಷಣೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಔರಂಗಾಬಾದ್‍ನಲ್ಲಿ ನಡೆದಿದೆ.
ಇಲ್ಲಿನ ಮೊಟ್ಟೆ ಅಂಗಡಿಯೊಂದರ ಸಮೀಪದಲ್ಲೇ ರೈದಾಸ್ ಪೂಜೆ ನಡೆಯುತ್ತಿತ್ತು. ಈ ವೇಳೆ ಅಲ್ಲಿ ಜನಸಾಗರವೇ ನೆರೆದಿತ್ತು. ಈ ವೇಳೆ 2 ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದವೇ ಹಿಂಸಾತ್ಮಕ ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ಓರ್ವ ಮಹಿಳೆ (Woman) ಸಾವನ್ನಪ್ಪಿದ್ದಾರೆ. ಗಾಯಗೊಂಡ 6 ಜನರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೊಟ್ಟೆಯ ಆಹಾರ ಸೇವಿಸಿದ್ದೇ ಘಟನೆಗೆ ಕಾರಣ ಎಂದು ಜಿಲ್ಲಾಡಳಿತ ಖಚಿತಪಡಿಸಿದೆ.