September 23, 2026
Wednesday, September 23, 2026
spot_img

ಶರಣ ತತ್ವ ಮತ್ತು ಯೋಗ ವಿಜ್ಞಾನದ ಸಂಗಮ: ಚಿತ್ರದುರ್ಗದಲ್ಲಿ ಸದ್ಗುರು ಶ್ರೀ ಜಗ್ಗಿ ವಾಸುದೇವ್ ವಿಶೇಷ ಉಪನ್ಯಾಸ

ಹೊಸದಿಗಂತ ವರದಿ ಚಿತ್ರದುರ್ಗ:

ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿರುವ ಆಧ್ಯಾತ್ಮಿಕ ಸಾಧಕ, ಈಶ ಫೌಂಡೇಶನ್‌ನ ಸ್ಥಾಪಕರಾದ ಸದ್ಗುರು ಶ್ರೀ ಜಗ್ಗಿ ವಾಸುದೇವ್ ಅವರು ಜುಲೈ1ರಂದು ಚಿತ್ರದುರ್ಗಕ್ಕೆ ಭೇಟಿ ನೀಡಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಹೆಲಿಕಾಫ್ಟರ್ ಮೂಲಕ ಚಿತ್ರದುರ್ಗಕ್ಕೆ ಆಗಮಿಸಿ ಶ್ರೀ ಶಿವಶರಣ ಮಾದರ ಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡುವರು. ಮಾದಾರ ಚನ್ನಯ್ಯ ಗುರುಪೀಠದ ಪೀಠಾಧ್ಯಕ್ಷರಾದ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಅವರೊಂದಿಗೆ ಸೌಹಾರ್ದಯುತ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ:

ನಂತರ ಮುರುಘಾಮಠದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯಲಿರುವ “ಶರಣರ ದೃಷ್ಟಿಯಲ್ಲಿ ಯೋಗ ವಿಜ್ಞಾನ” ಎಂಬ ವಿಷಯ ಕುರಿತ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ವೇದಿಕೆಯಲ್ಲಿ ಚಿತ್ರದುರ್ಗ ಕಬೀರಾನಂದ ಆಶ್ರಮದ ಶ್ರೀ ಶಿವಲಿಂಗಾನಂದ ಮಹಾ ಸ್ವಾಮೀಜಿಗಳು ಉಪಸ್ಥಿತರಿರುವರು.

ಮುರುಘಾಮಠದ ಆಡಳಿತ ಮಂಡಳಿ ಸದಸ್ಯರಾದ ಡಾ. ಶ್ರೀ ಬಸವಕುಮಾರ ಸ್ವಾಮೀಜಿಗಳ ದಿವ್ಯ ನೇತೃತ್ವದಲ್ಲಿ ಸಮಾರಂಭ ನೆರವೇರಲಿದೆ. ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಮುರುಘಾಮಠ ಹಾಗೂ ಜಗ್ಗಿ ವಾಸುದೇವ್ ಅವರ ಅನುಯಾಯಿಗಳು, ಸದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಮನವಿ ಮಾಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !