ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ಜನರಿಗೆ ಕಾಂಗ್ರೆಸ್ ಸರ್ಕಾರ ಮಕ್ಮಲ್ ಟೋಪಿ ಹಾಕಿದೆ. ಒಂದು ಗುಂಡಿ ಮುಚ್ಚೋ ಯೋಗ್ಯತೆಯೂ ಈ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಆಂತರಿಕ ಕಿತ್ತಾಟದ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದ ಜನರಿಗೆ ಮಕ್ಮಲ್ ಟೋಪಿ ಹಾಕಿ ಅಧಿಕಾರಕ್ಕೆ ಬಂದ ಸರ್ಕಾರ ಐಸಿಯುನಲ್ಲಿದೆ. ಸಿದ್ದರಾಮಯ್ಯ ನಾನೇ ಸಿಎಂ ಎನ್ನುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಎಲ್ಲಾ ದೇವರ ಮೊರೆ ಹೋಗುತ್ತಿದ್ದಾರೆ. ಇವರಿಬ್ಬರ ಜಗಳದಲ್ಲಿ ಕೂಸು ಬಡವಾದಂತಾಗಿದೆ ರಾಜ್ಯದ ಸ್ಥಿತಿ ಎಂದು ಕಿಡಿಕಾರಿದ್ದಾರೆ.
ರೈತರ ಸಮಸ್ಯೆಗಳಿಗೋಸ್ಕರ ಶುಕ್ರವಾರ ಸಿಎಂ, ಡಿಸಿಎಂ ಅವರನ್ನು ಭೇಟಿ ಮಾಡಿದ್ದೆವು. 21ರಂದು ದಾವಣೆಗೆರೆಯಲ್ಲಿ ಪ್ರತಿಭಟನೆ ಮಾಡಿದಾಗ 1,000 ಪೊಲೀಸರನ್ನು ನಿಯೋಜಿಸಿ ನಮ್ಮನ್ನು ಬಂಧಿಸಿದ್ದರು. ಪೊಲೀಸರು ಸರ್ಕಾರದ ಏಜೆಂಟರಾಗಿ ಕೆಲಸ ಮಾಡಿದ್ದರು ಎಂದು ಆರೋಪಿಸಿದ್ದಾರೆ.