ಡಿಕೆಶಿಗೆ ಟಾಂಗ್ ಕೊಟ್ಟ ಜಮೀರ್ ಗೆ ಶಾಕ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಮುಂದಿನ ಸಿಎಂ ವಿಚಾರದಲ್ಲಿ ಬಹಿರಂಗ ಹೇಳಿಕೆ ನೀಡುತ್ತಾ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಮಾತಿಗೆ ಮಾತಾನಾಡುತ್ತಾ ಇದ್ದ ಸಿದ್ದರಾಮಯ್ಯನವರ ಆಪ್ತ ಶಾಸಕ ಜಮೀರ್ ಅಹಮದ್ ಖಾನ್‌ಗೆ ಹೈಕಮಾಂಡ್ ಶಾಕ್ ಕೊಟ್ಟಿದೆ.
ಬಹಿರಂಗವಾಗಿ ಅಧ್ಯಕ್ಷರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ತೀವ್ರ ಇರಿಸು ಮುರಿಸು ಉಂಟು ಮಾಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮದ್ ಖಾನ್‌ಗೆ ಇಂದು(ಸೋಮವಾರ) ಎಐಸಿಸಿ ನೋಟಿಸ್ ನೀಡಿದೆ.

ಜಮೀರ್ ಅಹಮದ್ ಗೆ ರಾಜ್ಯ ಉಸ್ತುವಾರಿ ಸುರ್ಜೆವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚಿಸಿದ್ದು, ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ನೋಟಿಸ್ ನೀಡಲಾಗಿದೆ.
ಭವಿಷ್ಯದಲ್ಲಿ ಹೇಳಿಕೆ ನೀಡುವಾಗ ಎಚ್ಚರ ವಹಿಸಬೇಕು ಮತ್ತು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳಿಗೆ ದೃಢವಾಗಿ ಅಂಟಿಕೊಳ್ಳಬೇಕು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ನೋಟಿಸ್ ಬಗ್ಗೆ ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರತಿಕ್ರಿಯೆ ಕೇಳಿದ್ದಕ್ಕೆ ಜಮೀರ್ ಮಾತನಾಡಿದ್ದು, ನನಗೆ ಎಐಸಿಸಿಯಿಂದ ಯಾವುದೇ ನೋಟೀಸ್ ಬಂದಿಲ್ಲ. ಇದುವರೆಗೂ ಯಾವುದೇ ಬಂದಿಲ್ಲ. ನೋಟಿಸ್ ಬರುವಂತಹದ್ದು ನಾನೇನು ಮಾಡಿದೀನಿ. ನಾನು ಯಾವ ಜಾತಿ ಬಗ್ಗೆ ಮಾತನಾಡಿಲ್ಲ. ಯಾವ ಜಾತಿ ವಿರುದ್ದ ಮಾತನಾಡಿದ್ದೇನೆ ಹೇಳಿ‌ ಎಂದು ಪ್ರಶ್ನಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!