ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Wednesday, August 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಪಕ್ಷವೇ ಕಾರಣ: ವಿಜಯಕುಮಾರ್

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ, ಮಂಡ್ಯ :

ಪ್ರಸ್ತುತ ರಾಷ್ಟ್ರದಲ್ಲಿ ತೈಲ ಬೆಲೆ ನೂರರ ಗಡಿ ದಾಟಿದ್ದು, ಇದಕ್ಕೆ ಸುಧೀರ್ಘ 70 ವರ್ಷ ಆಳ್ವಿಕೆ ನಡೆಸಿದ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ವಿಜಯಕುಮಾರ್ ದೂರಿದರು.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಹಿಂದೆ ಕೇಂದ್ರದಲ್ಲಿ ಆಡಳಿತ ನಡೆಸಿದ ಯುಪಿಎ ಸರ್ಕಾರದ ಅವಧಿಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ 100 ಡಾಲರ್‌ವರೆಗೂ ಏರಿಕೆಯಾಗಿತ್ತು. ಆಗ ಅದನ್ನು ಸರಿದೂಗಿಸಲು ಪೆಟ್ರೋಲ್ ಬಾಂಡ್ ಮೂಲಕ ಲಕ್ಷಾಂತರ ಕೋಟಿ ರೂ.ಗಳನ್ನು ಹೊರಗಿನಿಂದ ಸಾಲ ಪಡೆದು ಪೆಟ್ರೋಲ್ ಮತ್ತು ಡೀಸೆಲ್‌ಗೆ ಸಬ್ಸಿಡಿ ನೀಡಲಾಗುತ್ತಿತ್ತು. ಅದರಿಂದ ದೇಶದ ಜನರಿಗೆ ಕಡಿಮೆ ಬೆಲೆಗೆ ಇಂಧನವನ್ನು ಪೂರೈಕೆ ಮಾಡಲಾಗುತ್ತಿತ್ತಾದರೂ, ಜನರ ತೆರಿಗೆ ಹಣವನ್ನೇ ಸಾಲ ಕೊಟ್ಟವರಿಗೆ ವರ್ಷಕ್ಕೆ 27 ಸಾವಿರ ಕೋ.ರೂ. ಬಡ್ಡಿಯನ್ನಾಗಿ ನೀಡಲಾಗುತ್ತಿತ್ತು ಎಂದು ವಿವರಿಸಿದರು.
ಪೆಟ್ರೋಲ್ ಬಾಂಡ್‌ನ ಮೂಲಕ ಲಕ್ಷಾಂತರ ರೂ. ಸಾಲ ಪಡೆದು ಸಾವಿರಾರು ಕೋಟಿ ರೂ.ಗಳ ಬಡ್ಡಿ ಕಟ್ಟುವುದನ್ನು ತಪ್ಪಿಸುವ ಉದ್ದೇಶದಿಂದ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಮೊದಲು ಸಾಲವನ್ನು ತೀರಿಸಿ, ದೇಶದ ಜನರ ತೆರಿಗೆ ಹಣ ಬಡ್ಡಿಗೇ ಪಾವತಿಯಾಗುತ್ತಿದ್ದುದ್ದನ್ನು ತಪ್ಪಿಸಲಾಯಿತು ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss