Saturday, August 13, 2022

Latest Posts

ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಅಧ್ಯಕ್ಷರೇ ಇಲ್ಲ!

ಹೊಸದಿಗಂತ ವರದಿ, ಶಿವಮೊಗ್ಗ:

ಮಹಾತ್ಮ ಗಾಂಧೀಜಿ ಅವರು ಹಿಂದೆಯೇ ಕಾಂಗ್ರೆಸ್ ವಿಸರ್ಜನೆ ಮಾಡಬೇಕು ಎಂದು ಹೇಳಿದ್ದರು. ಈಗ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಆ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದ ಶುಭಮಂಗಳ ಸಮುದಾಯ ಭವನದಲ್ಲಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಗ್ರಾಪಂ ಚುನಾವಣೆ ವಿಜೇತರು ಮತ್ತು ಸ್ಪರ್ಧಿಗಳಿಗೆ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ನೂರಾರು ವರ್ಷಗಳ ಇತಿಹಾಸ ಇರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಅಧ್ಯಕ್ಷರೇ ಇಲ್ಲ. ತಾತ್ಕಾಲಿಕ ಅಧ್ಯಕ್ಷರಿದ್ದಾರೆ. ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಎಂಬ ಪದಕ್ಕೆ ಸಂಬಂಧವೇ ಇಲ್ಲ. ಇತ್ತೀಚೆಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ನಡೆಯಿತು. ಇದರಲ್ಲಿ ಸಿದ್ದರಾಮಯ್ಯ ಮತ್ತು ಡಿಕೆಶಿ ರಾಜಕಾರಣದಲ್ಲಿ ಬಹಿರಂಗವಾಗಿ ಬೆತ್ತಲೆಯಾಗಿದ್ದಾರೆ. ನಾಯಕರ ಮಾತಿಗೆ ಬೆಲೆ ಇಲ್ಲ ಎಂದು ಸಿದ್ದರಾಮಯ್ಯ ಗುಂಪು ಮುನಿಸಿಕೊಂಡು ರೆಸಾರ್ಟ್ ಸೇರಿಕೊಂಡಿದೆ.

ಡಿಕೆಶಿ ಮತ್ತೊಂದು ಕಡೆಯಾಗಿದ್ದಾರೆ. ಮೇಯರ್ ಚುನಾವಣೆ ವೇಳೆ ಎಲ್ಲಿ ತಪ್ಪಾಗಿದೆ ಎಂದು ಪರಿಶೀಲಿಸಲು ಕೇಂದ್ರದಿಂದ ವೀಕ್ಷಕರನ್ನು ನೇಮಕ ಮಾಡಿದ್ದಾರೆ. ಇದು ಕಾಂಗ್ರೆಸ್ ಸ್ಥಿತಿ ಎಂದು ಲೇವಡಿ ಮಾಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss