ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ಸಿಗರ ಮಾತು ಭೂತದ ಬಾಯಿಂದ ಭಗವದ್ಗೀತೆ ಕೇಳಿದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ಕಾಂಗ್ರೆಸ್ ಸಂವಿಧಾನವನ್ನು ಪದೇ ಪದೇ ಉಲ್ಲಂಘಿಸುತ್ತಿದೆ. ಅವರು ಎಮರ್ಜೆನ್ಸಿ ಸಂದರ್ಭದಲ್ಲಿ ಏನು ಮಾಡಿದ್ದರು ಎಂಬುದು ಎಲ್ಲರಿಗೂ ತಿಳಿದೇ ಇದೆ, ಬಾಬಾ ಸಾಹೇಬ್ ಅಂಬೇಡ್ಕರ್ಗೂ ಕೂಡ ಅಪಮಾನ ಮಾಡಿದ್ದಾರೆ ಎಂದು ಹೇಳಿದರು.
ದೇಶದ ಅನೇಕ ರಾಜ್ಯಗಳಲ್ಲಿ ಜನರು ಈಗಾಗಲೇ ನಿಮಗೆ ಪಾಠ ಕಲಿಸಿದ್ದಾರೆ, ಈಗಲಾದರೂ ಬುದ್ಧಿ ಕಲಿತುಕೊಳ್ಳಿ ಎಂದು ತಿಳಿಸಿದ್ದಾರೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದನ್ನು ಸಂಬಂಧಪಟ್ಟ ಸಚಿವಾಲಯ ಗಮನಿಸುತ್ತಿದೆ, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.