ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಂವಿಧಾನವನ್ನು “ಬಡವರ ರಕ್ಷಣಾ ಕವಚ” ಅದನ್ನು ರಕ್ಷಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನಾಗರಿಕರು ಅದರ ಮೇಲೆ “ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ” ಎಂದು ಪ್ರತಿಜ್ಞೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಂವಿಧಾನ ವಿರುದ್ಧ ದಾಳಿಯಾದರೆ ಮೊದಲಿಗೆ ನಾನು ವಿರೋಧಿಸುತ್ತೇನೆ ಎಂದಿದ್ದಾರೆ.
ಇಂದು ಸಂವಿಧಾನ ದಿನದ ಅಂಗವಾಗಿ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವರು, ಸಂವಿಧಾನ ದಾಖಲೆಯು ಧರ್ಮ, ಜಾತಿ, ಪ್ರದೇಶ, ಭಾಷೆ ಅಥವಾ ಆರ್ಥಿಕ ಸ್ಥಿತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ಭಾರತೀಯನಿಗೂ ಸಮಾನತೆ, ಗೌರವ ಮತ್ತು ನ್ಯಾಯವನ್ನು ಖಾತರಿಪಡಿಸುವ “ಪವಿತ್ರ ಭರವಸೆ” ಎಂದು ಕರೆದುಕೊಂಡಿದ್ದಾರೆ.
ಸಂವಿಧಾನವನ್ನು ರಕ್ಷಿಸುವವರೆಗೆ, ಪ್ರತಿಯೊಬ್ಬ ಭಾರತೀಯನ ಹಕ್ಕುಗಳನ್ನು ರಕ್ಷಿಸಲಾಗುತ್ತದೆ ಎಂದು “ಅದನ್ನು ರಕ್ಷಿಸುವುದು ನನ್ನ ಕರ್ತವ್ಯ” ಎಂದರು.

