ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೋರೇಟರ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: 

ಮಂಗಳೂರಿನ ಕಾರ್ಪೋರೇಟರ್ ಒಬ್ಬರು ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡ್‌ನ ಕಾರ್ಪೊರೇಟರ್ ಜಗದೀಶ್ ಶೆಟ್ಟಿ ಬೋಳೂರು ಆತ್ಮಹತ್ಯೆಗೆ ಯತ್ನಿಸಿದವರು. ಅವರು ತಮ್ಮ ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಆಸ್ಪತ್ರೆಗ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಗದೀಶ್ ಶೆಟ್ಟಿ ಅವರು ಬೆಳಗ್ಗಿನಿಂದಲೇ ಮೊಬೈಲ್ ಸಂಪರ್ಕದಿಂದ ದೂರವಿದ್ದರು. ಇದರಿಂದ ಮನೆಯವರು ಆತಂಕಿತರಾಗಿದ್ದು, ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೊಬೈಲ್ ಲೊಕೇಶನ್ ಆಧಾರದಲ್ಲಿ ಪತ್ತೆಹಚ್ಚಲಾಗಿದ್ದು, ಅಷ್ಟರಲ್ಲಾಗಲೇ ಅವರು ವಿಷ ಸೇವಿಸಿದ್ದರು ಎನ್ನಲಾಗಿದೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!