ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳ ಸದಸ್ಯರು ಧರಣಿ ನಡೆಸಿದ್ದಾರೆ. ಅನುದಾನ, ದಲಿತರ ಹಣ ದುರ್ಬಳಕೆ ಮಾಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಬೋಗಸ್ ಬಜೆಟ್ ಮಂಡಿಸುವ ಮುನ್ನವೇ ತುಷ್ಟೀಕರಣವನ್ನು ಆರಂಭಿಸಿದ ಭಂಡ ಹಾಗೂ ಭ್ರಷ್ಟರು ಎಂದು ಬಿಜೆಪಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದೆ.