ಕೆಂಪು ಕೋಟೆ ಸುತ್ತ ಸುತುತ್ತಿದ್ದಾನೆ ಡ್ರೋನ್‌ಗಳ ರಣಬೇಟೆಗಾರ!!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನಾಳೆ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ದೆಹಲಿಯ ಕೆಂಪು ಕೋಟೆ ಬಳಿ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಕೆಂಪುಕೋಟೆಯಿಂದ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಈಗಾಗಲೇ ಕೆಂಪುಕೋಟೆ ಸುತ್ತಮುತ್ತ ಭದ್ರತೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಬಾರಿ ಕೆಂಪುಕೋಟೆ ಬಳಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ದಿಪಡಿಸಿದ ಕೌಂಟರ್-ಡ್ರೋನ್ ವ್ಯವಸ್ಥೆಯನ್ನು ಸಹ ಮಾಡಲಾಗಿದೆ. ಇದು ಸಣ್ಣ ಡ್ರೋನ್‌ಗಳಿಂದ ನಿರೀಕ್ಷಿತ ಯಾವುದೇ ಸಂಭಾವ್ಯ ಬೆದರಿಕೆಯನ್ನು ಎದುರಿಸುವಲ್ಲಿ ಸಮರ್ಥವಾಗಿದೆ. ಈ ವ್ಯವಸ್ಥೆಯು ಸುಮಾರು 4 ಕಿಮೀ ವ್ಯಾಪ್ತಿಯೊಳಗೆ ಯಾವುದೇ ಗಾತ್ರದ ಡ್ರೋನ್‌ಗಳನ್ನು ಪತ್ತೆ ಮಾಡುವುದರ ಜೊತೆಗೆ ಅದನ್ನು ನಿಷ್ಕ್ರಿಯಗೊಳಿಸುವ ಸಾಮರ್ಥ್ಯವನ್ನು ಸಹ ಹೊಂದಿದೆ ಎಂದು DRDO ಅಧಿಕಾರಿಗಳು ತಿಳಿಸಿದ್ದಾರೆ.

ಜೊತೆಗೆ ದೆಹಲಿ ಪೊಲೀಸರು ನಗರದಾದ್ಯಂತ ಗಸ್ತು ಮತ್ತು ವಿಧ್ವಂಸಕ ವಿರೋಧಿ ತಪಾಸಣೆಯನ್ನು ತೀವ್ರಗೊಳಿಸಿದ್ದಾರೆ. ಹೋಟೆಲ್‌ಗಳು, ಅತಿಥಿ ಗೃಹಗಳು, ಪಾರ್ಕಿಂಗ್ ಸ್ಥಳಗಳು ಮತ್ತು ರೆಸ್ಟೋರೆಂಟ್‌ಗಳನ್ನು ಪರಿಶೀಲಿಸಲಾಗುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!