ಹೊಸದಿಗಂತ ವರದಿ ಬಾಗಲಕೋಟೆ:
ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಮಾಜಿ ವಿದೇಶಾಂಗ ಸಚಿವರು ಹಾಗೂ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ ಎಸ್‌ಎಂ ಕೃಷ್ಣ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು ಎಂದು ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.