ದೇಶದಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದಿಂದ ಆಡಳಿತ: ಡಿ.ಕೆ. ಶಿವಕುಮಾರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಈ ಬಾರಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿಯವರು ಪ್ರಧಾನಿಯಾಗಲು ಸಾಧ್ಯವಿಲ್ಲ. ದೇಶದಲ್ಲಿ ಕಾಂಗ್ರೆಸ್ ಹಾಗು ಇಂಡಿಯಾ ಮೈತ್ರಿಕೂಟ ಆಡಳಿತ ಮಾಡಲಿದೆ ಎಂಬ ವಿಶ್ವಾಸ ನನ್ನದು ಎಂದರು.

ಪರಿಷತ್ ಚುನಾವಣೆ ಪೂರ್ವಭಾವಿ ಸಭೆ ಬಗ್ಗೆ ಕೇಳಿದಾಗ, ಶಿಕ್ಷಕರ ಹಾಗು ಪದವೀಧರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರವಾಗಿ ನಮ್ಮ ಪಕ್ಷದ ನಾಯಕರು ಹಾಗು ಪದಾಧಿಕಾರಿಗಳ ಜತೆ ಚರ್ಚೆ ಮಾಡಿದ್ದೇವೆ.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಹಿಡಿದು ಎಲ್ಲಾ ಮುಖಂಡರು ಸೇರಿ ಈ ಚುನಾವಣೆ ಎದುರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಲಾಗಿದೆ. ಇನ್ನು ಪಕ್ಷದ ಅಭ್ಯರ್ಥಿಗಳಿಗೆ ಬಿ ಫಾರಂ ನೀಡಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

LEAVE A REPLY

Please enter your comment!
Please enter your name here

error: Content is protected !!