‘ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ’ ಇದು ಪ್ರಜಾಪ್ರಭುತ್ವದ ಭಾಷೆಯೇ?: ರಾಹುಲ್ ಹೇಳಿಕೆ ವಿರುದ್ಧ ಮೋದಿ ಚಾಟಿ!

ಹೊಸದಿಗಂತ ಡಿಜಿಟಲ್ ಡೆಸ್ಕ್‌: 

ದೇಶವು ಮೂರನೇ ಬಾರಿಗೆ ಬಿಜೆಪಿಯನ್ನು ಆರಿಸಿದರೆ ದೇಶಕ್ಕೆ ಬೆಂಕಿ ಹಚ್ಚಲಾಗುವುದು ಎಂದು ಕಾಂಗ್ರೆಸ್ ಶಾಹಿ ಕುಟುಂಬದ ಶಹಜಾದಾ (ರಾಜಕುಮಾರ) ಕರೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವದ ಭಾಷೆಯೇ? ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.

ಉತ್ತರಾಖಂಡದಲ್ಲಿ (Uttarakhand) ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ದೇಶವು ಮೂರನೇ ಬಾರಿಗೆ ಬಿಜೆಪಿಯನ್ನು ಆರಿಸಿದರೆ ದೇಶಕ್ಕೆ ಬೆಂಕಿ ಹಚ್ಚಲಾಗುವುದು ಎಂದು ಕಾಂಗ್ರೆಸ್ ಶಾಹಿ ಕುಟುಂಬದ ಶಹಜಾದಾ (ರಾಜಕುಮಾರ) ಸ್ಪಷ್ಟ ಕರೆ ನೀಡಿದ್ದಾರೆ. ಅವರು 70 ವರ್ಷಗಳ ಕಾಲ ಆಡಳಿತ ನಡೆಸಿದ ನಂತರ 10 ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದಾರೆ. ದೇಶ ಮತ್ತು ದೇಶಕ್ಕೆ ಬೆಂಕಿ ಹಚ್ಚುವ ಮಾತನಾಡುತ್ತಿದ್ದಾರೆ ಇದನ್ನು ನೀವು ಒಪ್ಪುತ್ತೀರಾ?ದೇಶಕ್ಕೆ ಬೆಂಕಿ ಹಚ್ಚಲು ಬಿಡುತ್ತೀರಾ?ಈ ಭಾಷೆ ಸ್ವೀಕಾರಾರ್ಹವೇ?ಇದು ಪ್ರಜಾಪ್ರಭುತ್ವದ ಭಾಷೆಯೇ? ಇಂತಹ ಮಾತುಗಳನ್ನಾಡಿದವರನ್ನು ಶಿಕ್ಷಿಸುವುದಿಲ್ಲವೇ? ಎಂದು ಕೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಬಂಧನವನ್ನು ವಿರೋಧಿಸಿ ಭಾನುವಾರ ವಿರೋಧ ಪಕ್ಷಗಳು ರಾಮಲೀಲಾ ಮೈದಾನದಲ್ಲಿ ನಡೆಸಿದ ಬೃಹತ್ ರ‍್ಯಾಲಿಯಲ್ಲಿ ರಾಹುಲ್ ಗಾಂಧಿ (Rahul Gandhi), ಪ್ರಧಾನಿ ಮೋದಿ ಚುನಾವಣೆಯ ಪಂದ್ಯವನ್ನು ಫಿಕ್ಸ್ ಮಾಡಿದ್ದಾರೆ. ಚುನಾವಣೆಗೆ ಮುನ್ನ ಇಬ್ಬರು ಮುಖ್ಯಮಂತ್ರಿಗಳನ್ನು ಜೈಲಿಗೆ ಕಳುಹಿಸಿದ್ದಾರೆ ಎಂದು ಹೇಳಿದರು. ಈ ನಿಗದಿತ ಚುನಾವಣೆಗಳಲ್ಲಿ ಬಿಜೆಪಿ ಗೆದ್ದು ಸಂವಿಧಾನವನ್ನು ಬದಲಾಯಿಸಿದರೆ ದೇಶದಲ್ಲಿ ಬೆಂಕಿ ಹತ್ತಿಕೊಳ್ಳಲಿದೆ, ಇದನ್ನು ನೆನಪಿಡಿ ಎಂದು ಹೇಳಿದ್ದರು.

ಪ್ರಜಾಪ್ರಭುತ್ವದಲ್ಲಿ ಕಾಂಗ್ರೆಸ್ ಮತ್ತು ಅದರ ತುರ್ತು ಮನಸ್ಥಿತಿಯನ್ನು ಯಾರೂ ನಂಬುವುದಿಲ್ಲ. ಅವರು ಈಗ ಜನರನ್ನು ಪ್ರಚೋದಿಸುತ್ತಿದ್ದಾರೆ. ಕಾಂಗ್ರೆಸ್ ಭಾರತವನ್ನು ಅಸ್ಥಿರತೆಯತ್ತ ಕೊಂಡೊಯ್ಯಲು ಬಯಸಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.

ಇನ್ನುಕರ್ನಾಟಕದ ನಾಯಕ ಡಿ.ಕೆ.ಸುರೇಶ್ ಅವರ ಹೆಸರನ್ನು ಹೆಸರಿಸದೆ, ಟೀಕಿಸಿದ ಮೋದಿ, ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ದೇಶವನ್ನು ಉತ್ತರ ಮತ್ತು ದಕ್ಷಿಣ ಎಂದು ವಿಭಜಿಸುವ ಮಾತನಾಡಿದ್ದಾರೆ, ಅಂತಹ ವ್ಯಕ್ತಿಯನ್ನು ಶಿಕ್ಷಿಸಬೇಕಲ್ಲವೇ? ಆದರೆ ಕಾಂಗ್ರೆಸ್ ಅವರಿಗೆ ಚುನಾವಣಾ ಟಿಕೆಟ್ ನೀಡಿದೆ.ಬಿಪಿನ್ ರಾವತ್ ಅವರನ್ನು ಕಾಂಗ್ರೆಸ್ ನಿಂದಿಸಿರುವುದನ್ನು ಉತ್ತರಾಖಂಡ ಎಂದಿಗೂ ಮರೆಯುವುದಿಲ್ಲ ಎಂದಿದ್ದಾರೆ.

ಸಿಎಎ ಬಗ್ಗೆ ಪ್ರಸ್ತಾಪಿಸಿದ್ದ ಮೋದಿ, ಕಾಂಗ್ರೆಸ್ ಎಷ್ಟೇ ವಿರೋಧಿಸಿದರೂ ನಿರಾಶ್ರಿತರಿಗೆ ಮೋದಿಯವರ ಭರವಸೆ ಇದೆ ಎಂದು ಹೇಳಿದರು.

ಇಷ್ಟು ವರ್ಷ ನಮ್ಮ ಗುರುನಾನಕ್ ಅವರ ಗುರುದ್ವಾರವನ್ನು ದುರ್ಬೀನ್‌ನಲ್ಲಿ ನೋಡಬೇಕಾದ ರೀತಿಯಲ್ಲಿ ಕಾಂಗ್ರೆಸ್ ದೇಶವನ್ನು ವಿಭಜಿಸಿತು. ಬಿಜೆಪಿ ಕರ್ತಾರ್‌ಪುರ ಕಾರಿಡಾರ್‌ಗೆ ಮುಂದಾಯಿತು, ಕಾಂಗ್ರೆಸ್ ದೌರ್ಬಲ್ಯವನ್ನು ತೋರಿಸದಿದ್ದರೆ, ಯಾರೂ ನಮ್ಮ ಗಡಿಯನ್ನು ನೋಡುವ ಧೈರ್ಯ ಮಾಡುತ್ತಿರಲಿಲ್ಲ. ಶ್ರೀಲಂಕಾಗೆ ಕಚ್ಚತೀವು ದ್ವೀಪವನ್ನು ಕಾಂಗ್ರೆಸ್ ಹೇಗೆ ಬಿಟ್ಟುಕೊಟ್ಟಿತು ಎಂಬುದಕ್ಕೆ ಮತ್ತೊಂದು ತಾಜಾ ಉದಾಹರಣೆ ಈಗ ಮುನ್ನೆಲೆಗೆ ಬಂದಿದೆ. ಈ ಕಾಂಗ್ರೆಸ್ ದೇಶವನ್ನು ರಕ್ಷಿಸಬಹುದೇ? ಎಂದು ಪ್ರಧಾನಿ ಕೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!