September 10, 2026
Thursday, September 10, 2026
spot_img

ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುತ್ತೆ: ರಾಹುಲ್ ಗಾಂಧಿ ಕಳವಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಗಂಭೀರ ಎಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ದೇಶಕ್ಕೆ ದೊಡ್ಡ ಆರ್ಥಿಕ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ ಎಂದು ಹೇಳಿದ ಅವರು, ಅದರ ಹೊರೆ ಸಾಮಾನ್ಯ ಜನರ ಮೇಲೇ ಬೀಳಲಿದೆ ಎಂದು ಆರೋಪಿಸಿದರು.

ಯುವಕರು, ಕಾರ್ಮಿಕರ ಮೇಲೆ ಪರಿಣಾಮ

ರಾಯ್‌ಬರೇಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ಈ ಆರ್ಥಿಕ ಆಘಾತವು ಯುವಕರು, ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳಿಗೆ ಹೆಚ್ಚು ಹೊಡೆತ ನೀಡಲಿದೆ ಎಂದರು. ದೊಡ್ಡ ಉದ್ಯಮಿಗಳಿಗೆ ಇದರಿಂದ ಹೆಚ್ಚಿನ ತೊಂದರೆ ಆಗುವುದಿಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ನಡೆಸಿದರು.

ಇದನ್ನೂ ಓದಿ:

ಪ್ರಧಾನಿ ವಿರುದ್ಧ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಮತ್ತು ನಡೆ ನಡುವೆ ವ್ಯತ್ಯಾಸವಿದೆ ಎಂದು ರಾಹುಲ್ ಆರೋಪಿಸಿದರು. ಜನರಿಗೆ ವಿದೇಶ ಪ್ರವಾಸ ತಪ್ಪಿಸಲು ಸಲಹೆ ನೀಡುವವರು ತಾವೇ ನಿರಂತರವಾಗಿ ವಿದೇಶ ಪ್ರವಾಸ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ವ್ಯಾಪಾರಿಗಳಿಗೆ ಎಚ್ಚರಿಕೆ

ಮುಂದಿನ ದಿನಗಳು ಕಠಿಣವಾಗಲಿದ್ದು, ವ್ಯಾಪಾರಿಗಳು ಈಗಿನಿಂದಲೇ ಎಚ್ಚರಿಕೆಯಿಂದ ಇರಬೇಕು ಎಂದು ರಾಹುಲ್ ಗಾಂಧಿ ಹೇಳಿದರು. ಹಲವು ವರ್ಷಗಳಿಂದ ಕಾಣದ ಮಟ್ಟದ ಆರ್ಥಿಕ ಸವಾಲು ದೇಶ ಎದುರಿಸಬಹುದು ಎಂದು ಅವರು ಕಳವಳ ವ್ಯಕ್ತಪಡಿಸಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !