ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನವು ನಿರ್ಮೂಲನೆ ಅಸಾಧ್ಯ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣ ಮೂರ್ತಿ ಹೇಳಿದ್ದಾರೆ.
ಕೇವಲ ಉಚಿತ ಕೊಡುಗೆಗಳನ್ನು ಕೊಟ್ಟರೆ ಬಡತನ ಮಾಯವಾಗುತ್ತದೆ ಎಂದು ಅಂದುಕೊಂಡಿದ್ದರೆ, ಅದು ತಪ್ಪು. ಇಲ್ಲಿವರೆಗೆ ಈ ರೀತಿ ಉಚಿತ ಕೊಡುಗೆಗಳನ್ನು ಕೊಟ್ಟಿರುವ ಯಾವ ದೇಶವೂ ಬಡತನದಿಂದ ಹೊರಬಂದಿಲ್ಲ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದ್ದಾರೆ.
ಉಚಿತ ಕೊಡುಗೆಗಳ ಬದಲು, ನಾವು ಹೆಚ್ಚು ಉದ್ಯಮಗಳನ್ನು ಶುರು ಮಾಡಬೇಕು. ಆಗ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ. ಹೀಗಾದಲ್ಲಿ ಮಾತ್ರ ಬಡತನವು ಇಬ್ಬನಿಯಂತೆ ಮಾಯವಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.