ಹೊಸದಿಗಂತ ಡಿಜಿಟಲ್ ಡೆಸ್ಕ್:
ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಪ್ರತಿನಿತ್ಯ ಗ್ಯಾರಂಟಿ ಭಜನೆ ಮಾಡೋದು, ಕೇಂದ್ರ ಸರ್ಕಾರವನ್ನ ದೂರುವುದು ಬಿಟ್ಟು ಬೇರೆ ಏನನ್ನೂ ಈ ಸರ್ಕಾರದಿಂದ ನಿರೀಕ್ಷಿಸಲು ಸಾಧ್ಯವಿಲ್ಲ. ಸರ್ಕಾರದ ಖಜಾನೆ ಖಾಲಿಯಾಗಿದೆ. ಅಭಿವೃದ್ಧಿಯಲ್ಲಿ ಹೆಚ್ಚಿನ ಹಣ ಸೋರಿಕೆಯಾಗುತ್ತಿದೆ. ಗ್ಯಾರಂಟಿ ಹೆಸರಲ್ಲಿ ಹೆಚ್ಚಿನ ತೆರಿಗೆ ಹಾಕಿದ್ದಾರೆ. ನಾಡಿನ ಸಂಪತ್ತನ್ನು ವಾಮಮಾರ್ಗದಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.