ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಕೋರ್ಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದಾಖಲಿಸಿದ್ದ ಖಾಸಗಿ ದೂರಿನ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಧಾನಿ ಮೋದಿಯವರು ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ದೇಶದ ಸಂಪತ್ತು ಮುಸ್ಲೀಮರಿಗೆ ಮರು ಹಂಚಿಕೆ ಆಗುತ್ತದೆ ಅಂತ ಹೇಳಿಕೆ ನೀಡಿದ್ದಾರೆ.ಇದು ದ್ವೇಷ ಭಾಷಣದ ಹೇಳಿಕೆಯಾಗಿದ್ದೂ, ಅವರ ವಿರುದ್ಧ ದೂರು ದಾಖಲಿಸಲು ಅವಕಾಶ ನೀಡುವಂತೆ ಜಿಯಾಉರ್ ರಹಮಾನ್ ನೊಮಾನಿ ಎಂಬುವರು ಖಾಸಗಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ನ ನ್ಯಾಯಮೂರ್ತಿ ಕೆ.ಎನ್ ಶಿವಕುಮಾರ್ ಅವರು, ಪ್ರಧಾನಿ ನರೇಂದ್ರ ಮೋದಿಯವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದಾರೆಯೇ ಹೊರತು, ದ್ವೇಷ ಭಾಷಣದ ಹೇಳಿಕೆಯನ್ನು ನೀಡಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು. ಅಲ್ಲದೇ ದ್ವೇಷ ಭಾಷಣದ ಯಾವುದೇ ಅಂಶಗಳು ಪ್ರಧಾನಿ ಮೋದಿ ಅವರ ಹೇಳಿಕೆಯಲ್ಲಿ ಇಲ್ಲ ಅಂತ ಹೇಳಿ, ಖಾಸಗಿ ದೂರಿನ ಅರ್ಜಿಯನ್ನು ವಜಾಗೊಳಿಸಿತು.