spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, September 18, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಎರಡು ಡೋಸ್ ಲಸಿಕೆ ಪಡೆದಿದ್ದರೂ ಬೆಂಗಳೂರಿಗೆ ಬರಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೊರೋನಾ ಮೂರನೇ ಅಲೆ ಭೀತಿ ಹಿನ್ನೆಲೆ ಬೆಂಗಳೂರಿಗೆ ಬರುವವರಿಗೆ ಬಿಬಿಎಂಪಿ ಟಫ್ ರೂಲ್ಸ್ ಮಾಡಿದೆ.
ಎರಡು ಡೋಸ್ ಪಡೆದವರು ಕೂಡ ಬೆಂಗಳೂರಿಗೆ ಬರಲು ನೆಗೆಟಿವ್ ವರದಿ ತರುವುದು ಕಡ್ಡಾಯವಾಗಿದೆ.

ಈ ಬಗ್ಗೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಅವರು ಮಾಹಿತಿ ನೀಡಿದ್ದು, ‘ಎರಡು ಡೋಸ್ ಪಡೆದ ಹೊರತಾಗಿಯೂ ನೆಗೆಟಿವ್ ವರದಿ ತರಬೇಕಿದೆ. ಕೇರಳ, ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವವರಿಗೆ 72 ಗಂಟೆಗಳ ಒಳಗಿನ ಕೋವಿಡ್ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ’ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ್ದು, ‘ನೀವು ಕೇರಳ, ಮಹಾರಾಷ್ಟ್ರದಿಂದ ಬೆಂಗಳೂರಿಗೆ ಬರುವುದಾದರೆ 72 ಗಂಟೆಗಳ ಒಳಗಿನ ಕೋವಿಡ್ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ತನ್ನಿ. ಇಲ್ಲವಾದರೆ ಆರ್‌ಟಿಪಿಸಿಆರ್ ಸ್ವಾಬ್ ಸಂಗ್ರಹ ಮತ್ತು ಫಲಿತಾಂಶ ಬರುವವರೆಗೆ ಸಾಂಸ್ಥಿಕ ಕ್ವಾರೆಂಟೀನ್ ಆಗಬೇಕಾಗುತ್ತದೆ’ ಎಂದಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss