ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಕ್ಕಳ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಮೊಬೈಲ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳುವುದು ಮತ್ತು ವೀಕ್ಷಿಸುವುದು ಪೋಕ್ಸೊ ಅಥವಾ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವಾಗದು ಎಂಬ ಮದ್ರಾಸ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಈ ಕುರಿತು ಶುಕ್ರವಾರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಜೆ.ಬಿ. ಪಾರ್ದಿವಾಲ ಅವರಿದ್ದ ಪೀಠವು, ‘ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ವೀಕ್ಷಿಸುವುದು ಅಪರಾಧವಾಗದೆ ಇರಬಹುದು. ಆದರೆ, ಈ ಕೃತ್ಯಕ್ಕೆ ಮಗುವಿನ ಬಳಕೆಯು ಅಪರಾಧವಾಗಲಿದೆ’ ಎಂದು ಪ್ರತಿಪಾದಿಸಿದೆ.

ಮಕ್ಕಳು ಭಾಗಿಯಾಗಿದ್ದ ಅಶ್ಲೀಲ ವಿಡಿಯೊವೊಂದನ್ನು ತನ್ನ ಮೊಬೈಲ್‌ನಲ್ಲಿ ಇಟ್ಟುಕೊಂಡು ವೀಕ್ಷಣೆ ಮಾಡಿದ ಆರೋಪದ ಮೇರೆಗೆ 28 ವರ್ಷದ ವ್ಯಕ್ತಿಯ ವಿರುದ್ಧ ಪ್ರಾಸಿಕ್ಯೂಷನ್ ದಾಖಲಿಸಿದ್ದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ಜನವರಿ 11ರಂದು ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ರದ್ದುಗೊಳಿಸಿ, ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೋರಿ ಮಕ್ಕಳ ಕಲ್ಯಾಣಕ್ಕಾಗಿ ಕಾರ್ಯನಿರ್ವಹಿಸುವ ‘ಜಸ್ಟ್ ರೈಟ್ ಫಾರ್ ಚಿಲ್ಡ್ರನ್ ಅಲಯನ್ಸ್’ ಎಂಬ ಸರ್ಕಾರೇತರ ಸಂಸ್ಥೆಯು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!