ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ 9 ತಿಂಗಳ ಮಗುವಿನಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.
ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ವಾಣಿ ವಿಲಾಸ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಮಗುವಿನಲ್ಲಿ ಸೋಂಕು ಪತ್ತೆಯಾದ ಬೆನ್ನಲ್ಲೇ ಕೋವಿಡ್ ಮಾನಿಟರ್ ಮಾಡಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಈ ಬಗ್ಗೆ ಕೇಂದ್ರದಿಂದ ಯಾವುದೇ ಗೈಡ್ ಲೈನ್ಸ್ ಬಂದಿಲ್ಲ. ಜನ ಆತಂಕಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.