ಈ ಹೇಯ ಕೃತ್ಯ ಮಾಡಿದ ಅಪರಾಧಿಗಳಿಗೆ ಕಠಿಣ ಶಿಕ್ಷೆ ಕಟ್ಟಿಟಬುತ್ತಿ: ಅಮಿತ್ ಶಾ ಅಭಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಜನರ ಮೃತದೇಹಗಳಿಗೆ ಪುಷ್ಪಗುಚ್ಛ ಅರ್ಪಿಸಿದ್ದಾರೆ.

ಪೊಲೀಸ್ ನಿಯಂತ್ರಣ ಕೊಠಡಿಯಲ್ಲಿ ಭಯೋತ್ಪಾದನಾ ದಾಳಿಯಲ್ಲಿ ಮೃತಪಟ್ಟವರಿಗೆ ಅಮಿತ್ ಶಾ ಸೇರಿದಂತೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಸಂತ್ರಸ್ತರಿಗೆ ಗೌರವ ಸಲ್ಲಿಸಿದದ್ದಾರೆ.

“ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಭಾರವಾದ ಹೃದಯದಿಂದ ಅಂತಿಮ ನಮನ ಸಲ್ಲಿಸಿದೆ. ಭಾರತ ದೇಶ ಎಂದಿಗೂ ಭಯೋತ್ಪಾದನೆಗೆ ಮಣಿಯುವುದಿಲ್ಲ. ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ನಾವು ಬಿಡುವುದಿಲ್ಲ” ಎಂದು ಅಮಿತ್ ಶಾ ತಮ್ಮ ಎಕ್ಸ್ ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಇನ್ನು ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರೀನಗರದಲ್ಲಿ ಉನ್ನತ ಮಟ್ಟದ ಭದ್ರತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!