ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತಕ್ಕೆ ಇತ್ತೀಚೆಗೆ ಟಿ20 ವಿಶ್ವಕಪ್ ಕಿರೀಟ ತಂದುಕೊಟ್ಟಿದ್ದ ಸೂರ್ಯಕುಮಾರ್ ಯಾದವ್‌ಗೆ ಬಿಸಿಸಿಐ ಅಚ್ಚರಿಯ ನಿರ್ಧಾರ ಕೈಗೊಂಡಿದೆ. ಮುಂಬರುವ ಟಿ20 ಸರಣಿಗಳು ಮತ್ತು ಏಷ್ಯನ್ ಗೇಮ್ಸ್‌ಗಾಗಿ ಪ್ರಕಟಿಸಿದ ತಂಡದಲ್ಲಿ ಸೂರ್ಯಕುಮಾರ್‌ಗೆ ಸ್ಥಾನ ನೀಡದೇ, ಶ್ರೇಯಸ್ ಅಯ್ಯರ್ ಅವರನ್ನು ನೂತನ ನಾಯಕನಾಗಿ ಆಯ್ಕೆ ಮಾಡಲಾಗಿದೆ.
ನಾಯಕತ್ವ ಬದಲಾವಣೆಗೆ ಬಿಸಿಸಿಐ ಸ್ಪಷ್ಟನೆ
ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, ವಿಶ್ವಕಪ್ ಗೆಲುವಿನ ಬಳಿಕವೂ ಭವಿಷ್ಯದ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ತಂಡದ ಬಗ್ಗೆ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ. ಸೂರ್ಯಕುಮಾರ್ ಅವರ ಇತ್ತೀಚಿನ ಪ್ರದರ್ಶನ ಮತ್ತು ಮುಂದಿನ ಯೋಜನೆಗಳನ್ನು ಪರಿಗಣಿಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.
ಇದನ್ನೂ ಓದಿ:
ಫಾರ್ಮ್ ಕುಸಿತ ನಿರ್ಧಾರಕ್ಕೆ ಕಾರಣ
ನಾಯಕತ್ವ ವಹಿಸಿಕೊಂಡ ಬಳಿಕ ಸೂರ್ಯಕುಮಾರ್ ಅವರ ಬ್ಯಾಟಿಂಗ್ ಪ್ರದರ್ಶನದಲ್ಲಿ ಕುಸಿತ ಕಂಡುಬಂದಿತ್ತು. ಇತ್ತೀಚಿನ ಪಂದ್ಯಗಳಲ್ಲಿ ನಿರೀಕ್ಷಿತ ಮಟ್ಟದ ರನ್ ಗಳಿಸಲು ವಿಫಲವಾಗಿದ್ದ ಅವರು, ಹಲವು ಬಾರಿ ಕಡಿಮೆ ಮೊತ್ತಕ್ಕೆ ವಿಕೆಟ್ ಒಪ್ಪಿಸಿದ್ದರು.
ಶ್ರೇಯಸ್‌ಗೆ ಹೊಸ ಜವಾಬ್ದಾರಿ
ಬಿಸಿಸಿಐ ಈಗ ಯುವ ಆಟಗಾರರ ಮೇಲೆ ಹೆಚ್ಚು ಗಮನಹರಿಸಿದ್ದು, ತಂಡದ ನಾಯಕತ್ವವನ್ನು ಶ್ರೇಯಸ್ ಅಯ್ಯರ್ ಹೆಗಲಿಗೆ ನೀಡಿದೆ. ಉಪನಾಯಕನಾಗಿ ತಿಲಕ್ ವರ್ಮಾ ತಂಡವನ್ನು ಮುನ್ನಡೆಸಲಿದ್ದಾರೆ.
ಸೂರ್ಯಕುಮಾರ್ ನಾಯಕತ್ವದಲ್ಲಿ ಭಾರತ ಏಷ್ಯಾಕಪ್ ಹಾಗೂ ಟಿ20 ವಿಶ್ವಕಪ್ ಜಯಿಸಿದರೂ, ಇತ್ತೀಚಿನ ಕಳಪೆ ಫಾರ್ಮ್ ಅವರ ಸ್ಥಾನಕ್ಕೆ ಧಕ್ಕೆಯಾಗಿದೆ. ಭವಿಷ್ಯದ ಯೋಜನೆಗಳಿಗೆ ಆದ್ಯತೆ ನೀಡಿರುವ ಆಯ್ಕೆ ಸಮಿತಿ ಹೊಸ ದಿಕ್ಕಿನಲ್ಲಿ ಸಾಗಲು ಮುಂದಾಗಿದೆ.



