ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಬಹುನಿರೀಕ್ಷಿತ ಲೋಕಸಭಾ ಚುನಾವಣೆಯ ದಿನಾಂಕ ಪ್ರಕಟವಾಗಲಿದೆ.
2024 ರ ಲೋಕಸಭಾ ಮತ್ತು ಕೆಲ ರಾಜ್ಯಗಳ ವಿಧಾನಸಭೆಗಳ ಚುನಾವಣಾ ದಿನಾಂಕವನ್ನು ಇಂದು ಮಧ್ಯಾಹ್ನ ಮೂರು ಗಂಟೆಗೆ ಚುನಾವಣಾ ಆಯೋಗ ಪ್ರಕಟಿಸಲಿದೆ.
ದೆಹಲಿಯ ವಿಜ್ಞಾನ ಭವನದಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಯಲಿದ್ದು, ನೇರ ಪ್ರಸಾರ ನಡೆಯಲಿದೆ. ಕಳೆದ ಬಾರಿ ಮಾರ್ಚ್ 10 ರಂದು ಚುನಾವಣಾ ದಿನಾಂಕ ಘೋಷಣೆ ಮಾಡಲಾಗಿತ್ತು.