ನಿಮ್ಮ ಮನೆಯ ಮಗಳು, ನಿಮ್ಮ ಸೇವೆಗೆ ಸದಾ ಸಿದ್ಧ ಅಂತಿದ್ರಲ್ಲಾ, ರಸ್ತೆ ಸಂಪೂರ್ಣ ಹದಗೆಟ್ಟಿದೆ ನೋಡಿಬನ್ನಿ!!

ಹೊಸದಿಗಂತ ವರದಿ ಬೆಳಗಾವಿ: ತಾಲೂಕಿನ ಮೋದಗಾ ಗ್ರಾಮದಿಂದ ಹಿರೇಬಾಗೇವಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ವಾಹನ ಸವಾರರು ನಿತ್ಯವೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನಗಳನ್ನು ಪಾರು ಮಾಡಿಕೊಂಡು ಸಂಚರಿಸುವುದು ಸವಾರರಿಗೆ ಸವಾಲಾಗಿ ಪರಿಣಮಿಸಿದೆ. ಮೋದಗಾ ಗ್ರಾಮದಿಂದ ಏರಿ ಗುಡ್ಡದವರೆಗೆ ರಸ್ತೆ ಅಭಿವೃದ್ಧಿಪಡಿಸಲಾಗಿದ್ದರೂ, ಏರಿ ಗುಡ್ಡದ ಬಳಿ ರಸ್ತೆ ಸಂಪೂರ್ಣವಾಗಿ ಹಾಳಾಗಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ಹೋರಹಾಕುತ್ತಿದ್ದಾರೆ. ವಾಹನ ಸವಾರರು ಗುಂಡಿಗಳಿಂದ ತಪ್ಪಿಸಿಕೊಂಡು ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ತೆರಳುವಂತಾಗಿದೆ … Continue reading ನಿಮ್ಮ ಮನೆಯ ಮಗಳು, ನಿಮ್ಮ ಸೇವೆಗೆ ಸದಾ ಸಿದ್ಧ ಅಂತಿದ್ರಲ್ಲಾ, ರಸ್ತೆ ಸಂಪೂರ್ಣ ಹದಗೆಟ್ಟಿದೆ ನೋಡಿಬನ್ನಿ!!