Sunday, April 18, 2021

Latest Posts

ಹಾಡಹಗಲೇ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣ: ಆರೋಪಿಗೆ 7 ವರ್ಷ ಜೈಲು ಶಿಕ್ಷೆ , 10 ಸಾವಿರ ರೂ.ದಂಡ

ಹೊಸ ದಿಗಂತ ವರದಿ, ದಾವಣಗೆರೆ:

ಹಾಡುಹಗಲೇ ಒಂಟಿ ಮಹಿಳೆಯ ಮನೆಗೆ ನುಗ್ಗಿ ಹಲ್ಲೆ ನಡೆಸಿ, ಪಂಚಲೋಹದ ಮೂರ್ತಿ, ಪಾದುಕೆ ಜೊತೆಗೆ ಮಹಿಳೆಯ ಚಿನ್ನಾಭರಣ ಅಪಹರಿಸಲು ಯತ್ನಿಸಿದ್ದ ಅಪರಾಧಿಗೆ ಪ್ರಧಾನ ಮತ್ತು ಸತ್ರ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ
ವಿಧಿಸಿ ತೀರ್ಪು ನೀಡಿದೆ.
ಇಲ್ಲಿನ ಅಶೊಕ ನಗರ ನಿವಾಸಿ ಬಸವರಾಜ್ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 2014 ಮಾರ್ಚ್ 24ರಂದು ಮಧ್ಯಾಹ್ನ ದೇವರಾಜ ಅರಸು ಬಡಾವಣೆಯ ನೀಲಮ್ಮ ಎಂಬುವರ ಮನೆಗೆ ನುಗ್ಗಿ ದೇವರ ಕೋಣೆಯಲ್ಲಿದ್ದ ಪಂಚಲೋಹದ ಲಕ್ಷ್ಮೀದೇವಿಯ ವಿಗ್ರಹ, 2 ಪಾದುಕೆ ಅಪಹರಿಸುವ ಜೊತೆಗೆ ತಡೆಯಲು ಬಂದ ನೀಲಮ್ಮ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಕೊರಳಲ್ಲಿದ್ದ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಿಸಿದ್ದ. ಈ ವೇಳೆ ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಸವನಗರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ಮಾಲುಸಮೇತ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು.
ಆರೋಪಿ ವಿರುದ್ಧ ನಗರ ಸಿಪಿಐ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನಡೆದು ಆರೋಪ ಸಾಬೀತಾಗಿದ್ದರಿಂದ ನ್ಯಾಯಾಧೀಶೆ ಕೆ.ಬಿ.ಗೀತಾ ಅಪರಾಧಿ ಬಸವರಾಜ್‌ಗೆ 7 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಸ್.ವಿ.ಪಾಟೀಲ್ ವಾದ ಮಂಡಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss