SHOCKING | ಕೊಲ್ಕತ್ತಾದಲ್ಲಿ ನಾಪತ್ತೆಯಾಗಿದ್ದ ಬಾಂಗ್ಲಾ ಸಂಸದನ ಮೃತದೇಹ ಪತ್ತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮೇ 13 ರಿಂದ ನಾಪತ್ತೆಯಾಗಿದ್ದ ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್‌ನ ಸಂಸದ ಅನ್ವರುಲ್ ಅಜೀಮ್ ಅನಾರ್  ಇಂದು ಕೋಲ್ಕತ್ತಾದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೇ 12ರಂದು ವೈದ್ಯಕೀಯ ತಪಾಸಣೆಗಾಗಿ ಸಂಸದರು ಭಾರತಕ್ಕೆ ಬಂದಿದ್ದರು. ಆದರೆ ಮರುದಿನದಿಂದ ಅವರು ಕಾಣೆಯಾಗಿದ್ದರು. ಈ ಸಂಬಂಧ ಅವರ ಮನೆಯವರು ದೂರು ದಾಖಲಿಸಿದ್ದರು. ಹೀಗಾಗಿ ಪೊಲೀಸರು ಸಂಸದರ ಹುಡುಕಾಟ ನಡೆಸುತ್ತಿದ್ದರು. ಇಂದು ಬೆಳಗ್ಗೆ ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಲ್ಲಿ ಸಂಸದರ ಶವ ಪತ್ತೆಯಾಗಿದೆ.

ನ್ಯೂ ಟೌನ್ ಕಟ್ಟಡದಲ್ಲಿ ಹಲವಾರು ರಕ್ತದ ಕಲೆಗಳು ಕಂಡುಬಂದಿವೆ. ಅಲ್ಲಿ ಅನ್ವರುಲ್ ಅಜೀಂನನ್ನು ಕೊಲೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಸಂಸದರನ್ನು ಕೊಲೆ ಮಾಡಿ ಶವವನ್ನು ಈ ಪ್ರದೇಶದಲ್ಲಿ ಬಿಸಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!